Thursday, May 16, 2024
spot_imgspot_img
spot_imgspot_img

ಉಡುಪಿ : ಮಾಧ್ಯಮ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರಕ್ಕೂ ಅನುಮತಿ ಕಡ್ಡಾಯ – ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.

- Advertisement -G L Acharya panikkar
- Advertisement -

ಉಡುಪಿ : ಜಿಲ್ಲೆಯಲ್ಲಿ ಮಾದರಿ ಚುನಾವಣಾ ನೀತಿ ಸಂಹಿತೆಯು ಜಾರಿಯಲಿದ್ದು, ಈ ಅವಧಿಯಲ್ಲಿ ಪತ್ರಿಕೆಗಳು, ದೃಶ್ಯ ಮಾಧ್ಯಮಗಳು, ಕೇಬಲ್ ಟಿವಿ, ಪೇಸ್‌ಬುಕ್ ವಾಟ್ಸಾಪ್ ಸೇರಿದಂತೆ ಎಲ್ಲಾ ರೀತಿಯ ಸೋಷಿಯಲ್ ಮೀಡಿಯಾಗಳಲ್ಲಿ , ಯಾವುದೇ ರಾಜಕೀಯ ಪಕ್ಷ ಅಥವಾ ಚುನಾವಣಾ ಅಭ್ಯರ್ಥಿಯ ಪರವಾಗಿ ಜಾಹೀರಾತುಗಳನ್ನು ಪ್ರಕಟಿಸಲು ಜಿಲ್ಲಾ ಎಂಸಿಎಂಸಿ ಸಮಿತಿಯ ಅನುಮತಿ ಕಡ್ಡಾಯವಾಗಿದ್ದು, ಸಮಿತಿಯ ಅನುಮತಿ ಪಡೆಯದೇ ಜಾಹೀರಾತು ಪ್ರಕಟಿಸಿದಲ್ಲಿ ಸಂಬಂದಪಟ್ಟವರ ವಿರುದ್ದ ಪ್ರಜಾಪ್ರತಿನಿಧಿ ಕಾಯ್ದೆಯನ್ವಯ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಎಚ್ಚರಿಕೆ ನೀಡಿದ್ದಾರೆ.

ಜಾಹೀರಾತುಗಳ ಪ್ರಕಟಣೆ ಬಗ್ಗೆ ಅನುಮತಿ ಪಡೆಯುವ ಕುರಿತಂತೆ, ಜಿಲ್ಲಾ ಎಂಸಿಎಂಸಿ ಸಮಿತಿಗೆ ಜಾಹೀರಾತು ಪ್ರಕಟಣೆ ಕೋರಿ ಲಿಖಿತ ಅರ್ಜಿಯನ್ನು ಸಲ್ಲಿಸಿ, ಅಗತ್ಯ ಅನುಮತಿ ಪಡೆದ ನಂತರವೇ ಜಾಹೀರಾತು ಪ್ರಕಟಿಸಬೇಕು. ಚುನಾವಣಾ ಪ್ರಚಾರಕ್ಕಾಗಿ ಮುದ್ರಣಗೊಂಡ ಕರಪತ್ರಗಳ ಮೇಲೆ ಅದನ್ನು ಮುದ್ರಣ ಮಾಡಿದ ಮುದ್ರಕರ ಹೆಸರು, ಹಾಗೂ ವಿಳಾಸ, ಪ್ರತಿಗಳ ಸಂಖ್ಯೆ ಸೇರಿದಂತೆ ಮತ್ತಿತರ ವಿಷಯಗಳನ್ನು ಕಡ್ಡಾಯವಾಗಿ ಮುದ್ರಿಸಬೇಕು ಎಂದರು.

ಮುದ್ರಣ ಕುರಿತ ಮಾಹಿತಿಯನ್ನು ನಿಗಧಿತ ನಮೂನೆಯಲ್ಲಿ 3 ದಿನಗಳ ಒಳಗಾಗಿ ಹಾಗೂ ಸಾಮಗ್ರಿಯ ಪ್ರತಿಯನ್ನು ಕಡ್ಡಾಯವಾಗಿ ಜಿಲ್ಲಾಧಿಕಾರಿ ಕಚೇರಿಗೆ ಒದಗಿಸಬೇಕು. ಇದರ ಉಲ್ಲಂಘನೆಯು ಪ್ರಜಾಪ್ರತಿನಿಧಿ ಕಾಯ್ದೆಯ ಉಲ್ಲಂಘನೆಯಾಗಲಿದೆ ಎಂದರು. ಜಿಲ್ಲಾ ಎಂಸಿಎಂಸಿ ಕಚೇರಿಯನ್ನು ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಮೊದಲನೇ ಮಹಡಿಯಲ್ಲಿ ತೆರೆಯಲಾಗಿದ್ದು, ಜಾಹೀರಾತು ಪ್ರಕಟಣೆ ಕುರಿತಂತೆ ಅನುಮತಿ ಪಡೆಯಲು ಈ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದರು.

- Advertisement -

Related news

error: Content is protected !!