Friday, April 26, 2024
spot_imgspot_img
spot_imgspot_img

ಉಡುಪಿ: ಮುಸ್ಲಿಂ ವಿದ್ಯಾರ್ಥಿಯನ್ನು “ಟೆರರಿಸ್ಟ್” ಎಂದ ಪ್ರಾಧ್ಯಾಪಕ; ತರಾಟೆಗೆ ತೆಗೆದುಕೊಂಡ ಯುವಕ, ವಿಡಿಯೋ ವೈರಲ್‌

- Advertisement -G L Acharya panikkar
- Advertisement -

ಮಣಿಪಾಲ: ಮಾಹೆ ವಿಶ್ವವಿದ್ಯಾಲಯದ MIT ಕಾಲೇಜಿನಲ್ಲಿ ಪ್ರಾಧ್ಯಾಪಕರೊಬ್ಬರು ತರಗತಿ ಸಮಯದಲ್ಲಿ ಮುಸ್ಲಿಂ ವಿದ್ಯಾರ್ಥಿಗೆ “ಟೆರರಿಸ್ಟ್” ಎಂದು ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಇದೀಗ ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದೇ ತಿಂಗಳ ನವೆಂಬರ್ 26ರಂದು ಘಟನೆ ನಡೆದಿದ್ದು, ವಿದ್ಯಾರ್ಥಿಗಳೊಂದಿಗೆ ಮಾತನಾಡುವಾಗ ಮುಸ್ಲಿಮರು ಟೆರರಿಸ್ಟ್ ಗಳು ಎಂಬ ಅರ್ಥದಲ್ಲಿ ಪ್ರೊಫೆಸರ್ ಹೇಳಿದ್ದು, ಈಗ ವಿವಾದಕ್ಕೆ ಕಾರಣವಾಗಿದೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿದ್ಯಾ ರ್ಥಿ ಹಂಝಾ ತನ್ನನ್ನು ಭಯೋತ್ಪಾದಕ ಎಂದು ಕರೆದ ಸಹಾಯಕ ಪ್ರಾಧ್ಯಾಪಕ ರವೀಂದ್ರನಾಥ್ ಅವರನ್ನು ಪ್ರಶ್ನಸುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಪ್ರಾಧ್ಯಾಪಕ ರವೀಂದ್ರನಾಥ್ ತರಗತಿಯಲ್ಲಿ ವಿದ್ಯಾರ್ಥಿಯ ಹೆಸರನ್ನು ಕೇಳಿದ್ದು, ವಿದ್ಯಾರ್ಥಿ ಮುಸ್ಲಿಂ ಹೆಸರು ಹೇಳಿದ ತಕ್ಷಣ ಓ ನೀನು ಕಸಬ್ ರೀತಿಯಾ ಎಂದು ಪ್ರಶ್ನಿಸಿದ್ದಾರೆ. 2008ರ ಮುಂಬೈ ದಾಳಿಯಲ್ಲಿ ಸೆರೆ ಸಿಕ್ಕ ಏಕೈಕ ಉಗ್ರ ಅಜ್ಮಲ್ ಕಸಬ್‌ಗೆ ವಿದ್ಯಾರ್ಥಿಯನ್ನು ಹೋಲಿಸಿದ್ದಕ್ಕೆ ವಿದ್ಯಾರ್ಥಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾನೆ.

ಪ್ರೊಫೆಸರ್ ಮಾತಿಗೆ ತರಗತಿಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ ವಿದ್ಯಾರ್ಥಿ, ಮುಸ್ಲಿಂ ಕಮ್ಯೂನಿಟಿಯನ್ನು ಟೆರರಿಸ್ಟ್ ಎಂದು ಕರೆಯಬೇಡಿ, ಅನಗತ್ಯವಾಗಿ ಈ ರೀತಿ ಮಾತನಾಡಬೇಡಿ ಎಂದಿದ್ದಾನೆ. ಬಳಿಕ ಪ್ರಾಧ್ಯಾಪಕರು ವಿದ್ಯಾರ್ಥಿ ತನ್ನ ಮಗನಂತೆ ಎಂದು ಹೇಳಿದ್ದಾರೆ. ಇದನ್ನು ಪ್ರಶ್ನಿಸಿದ ವಿದ್ಯಾರ್ಥಿ “ನೀವು ನಿಮ್ಮ ಮಗನಿಗೆ ಹೀಗೆ ಮಾತನಾಡುತ್ತೀರಾ? ನೀವು ಅವನನ್ನು ಭಯೋತ್ಪಾದಕ ಎಂದು ಕರೆಯುತ್ತೀರಾ? ನೀವು ಎಷ್ಟು ಜನರ ಮುಂದೆ ನನ್ನನ್ನು ಹಾಗೆ ಕರೆಯುತ್ತೀರಿ? ಇದು ತರಗತಿ, ನೀವು ವೃತ್ತಿಪರರಾಗಿ ಕಲಿಸುತ್ತಿದ್ದೀರಿ, ಮುಸ್ಲಿಮನಾಗಿ ದಿನನಿತ್ಯ ಇದನ್ನು ಎದುರಿಸುವುದು ತಮಾಷೆಯಲ್ಲ. ನೀವು ನನ್ನನ್ನು ಹಾಗೆ ಕರೆಯಬೇಡಿ” ಎಂದು ವಿದ್ಯಾರ್ಥಿ ವಾಗ್ವಾದಕ್ಕಿಳಿದಿದ್ದಾನೆ. ವಿದ್ಯಾರ್ಥಿ ಆಕ್ಷೇಪಿಸುತ್ತಿದ್ದಂತೆ ಪ್ರೊಫೆಸರ್ ವಿಷಾದ ವ್ಯಕ್ತಪಡಿಸಿ, ಸ್ಥಳದಲ್ಲೇ ಕ್ಷಮೆ ಕೋರಿದ್ದಾರೆ.

ನೀವು ಕ್ಷಮೆ ಕೇಳಿದ ತಕ್ಷಣ ಮಾಡಿರುವ ಆರೋಪ ಬದಲಾಗಲ್ಲ ಎಂದು ವಿದ್ಯಾರ್ಥಿ ಆಕ್ಷೇಪಿಸಿದ್ದಾನೆ. ಈ ವೀಡಿಯೋ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ಉಪನ್ಯಾಸಕನ ವಿರುದ್ಧ ಮಾಹೆ ವಿಶ್ವವಿದ್ಯಾನಿಲಯ ಕ್ರಮ ಕೈಗೊಂಡಿದೆ. ವಿವಿಯ ಉಪನ್ಯಾಸಕನನ್ನು ಅಮಾನತುಗೊಳಿಸಿ ಆಂತರಿಕ ತನಿಖೆಗೆ ನಿರ್ಧರಿಸಿದೆ. ವಿದ್ಯಾರ್ಥಿಗೆ ಕೌನ್ಸಿಲಿಂಗ್ ಮೂಲಕ ಸಾಂತ್ವನ ಹೇಳಿದೆ.

- Advertisement -

Related news

error: Content is protected !!