Saturday, May 4, 2024
spot_imgspot_img
spot_imgspot_img

ಉಡುಪಿ: ರಾತ್ರಿ ಪೂರ್ತಿ ಡಿ.ಜೆ ಸೌಂಡ್‌; ಮೆಹಂದಿ ಮನೆಗೆ ಪೊಲೀಸರ ದಾಳಿ

- Advertisement -G L Acharya panikkar
- Advertisement -
vtv vitla

ಉಡುಪಿ: ಮೆಹಂದಿ ಕಾರ್ಯಕ್ರಮದಲ್ಲಿ ಅವಧಿ ಮೀರಿ ಕರ್ಕಶವಾದ ಡಿ.ಜೆ ಸೌಂಡ್‌ ಹಾಕಿದ್ದ ಮನೆಗೆ ಪೊಲೀಸರು ದಾಳಿ ಮಾಡಿದ ಘಟನೆ ಕುಂಜಿಬೆಟ್ಟು ಪರಿಸರದಲ್ಲಿ ನಡೆದಿದೆ.

ಕುಂಜಿಬೆಟ್ಟು ಪರಿಸರದಲ್ಲಿ ಫೆ.26ರಂದು ತಡರಾತ್ರಿ 1.30ರ ಸುಮಾರಿಗೆ ಮೆಹಂದಿ ಕಾರ್ಯಕ್ರಮದಲ್ಲಿ ಅತೀ ಕರ್ಕಶವಾದ ಡಿಜೆ ಸೌಂಡ್‌ ಹಾಕಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದಾರೆ ಎಂಬ ಸಾರ್ವಜನಿಕ ದೂರಿನ ಮೇರೆಗೆ ರೌಂಡ್ಸ್‌ ಕರ್ತವ್ಯದಲ್ಲಿದ್ದ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ 76 ಬಡಗಬೆಟ್ಟು ಗ್ರಾಮದ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನದ ಬಳಿ ಶರತ್‌ ಎಂಬವರ ಮನೆಯಲ್ಲಿ ನಡೆಯುತ್ತಿದ್ದ ಮೆಹಂದಿ ಕಾರ್ಯಕ್ರಮದಲ್ಲಿ ಯಾವುದೇ ಪರವಾನಿಗೆ ಅಥವಾ ಪೂರ್ವಾನುಮತಿ ಇಲ್ಲದೆ ಅತೀ ಕರ್ಕಶವಾಗಿ ಡಿಜೆ ಸೌಂಡ್‌ ಹಾಕಿಕೊಂಡು ರಾತ್ರಿ 2 ಗಂಟೆಯವರೆಗೆ ನೃತ್ಯ ಮಾಡುತ್ತಿದ್ದರು.

ಈ ವೇಳೆ ಪೊಲೀಸರು 4 ಸೌಂಡ್‌ ಬಾಕ್ಸ್‌, ಡಿಜೆ ಪರಿಕರಗಳು, ಲೈಟಿಂಗ್‌ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!