Monday, April 29, 2024
spot_imgspot_img
spot_imgspot_img

ಉಡುಪಿ: ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಗ್ರಾಮಲೆಕ್ಕಾಧಿಕಾರಿ

- Advertisement -G L Acharya panikkar
- Advertisement -

ಉಡುಪಿ: ಲಂಚ ಸ್ವೀಕರಿಸುತ್ತಿದ್ದಾಗ ರೆಡ್‌ ಹ್ಯಾಂಡ್ ಆಗಿ ಸರಕಾರಿ ನೌಕರನೊಬ್ಬ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಪೆರ್ಣಂಕಿಲ ಗ್ರಾಮದಲ್ಲಿ ನಡೆದಿದೆ. ಜಮೀನು ಸಕ್ರಮ ಮಾಡಿಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರಿಂದ ಗ್ರಾಮಲೆಕ್ಕಾಧಿಕಾರಿಯೋರ್ವ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.

ಪೆರ್ಣಂಕಿಲ ಗ್ರಾಮದ ಲೆಕ್ಕಾಧಿಕಾರಿ ಹರೀಶ್ ಎನ್.ಪಿ. ಬಂಧಿತ ಆರೋಪಿ. ಪೆಣಂಕಿಲದ ನಿವಾಸಿಯೊಬ್ಬರು ಪೆರ್ಣಂಕಿಲ ಗ್ರಾಮದ ಸರ್ವೆ ನಂ. 171/1ರಲ್ಲಿ 1.15 ಎಕರೆ ಜಮೀನಿನ ಸಕ್ರಮಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಆರ್ಜಿಗೆ ಸಂಬಂಧಿಸಿದಂತೆ ಗ್ರಾಮ ಲೆಕ್ಕಾಧಿಕಾರಿ ಹರೀಶ್ ಜಮೀನು ಸಕ್ರಮ ಮಾಡಿಕೊಡಲು 10 ಸಾವಿರ ರೂ.ಗೆ ಬೇಡಿಕೆ ಇರಿಸಿದ್ದರು. ಈ ಬಗ್ಗೆ ಜಾಗದ ಮಾಲೀಕ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದನು. ಅದರಂತೆ ಉಡುಪಿ ಲೋಕಾಯುಕ್ತ ಠಾಣೆಯ ಪ್ರಭಾರ ಉಪಾಧೀಕ್ಷಕ ಜಯರಾಮ ಡಿ. ಗೌಡ ಅವರ ನೇತೃತ್ವದಲ್ಲಿ ಉಪಾಧೀಕ್ಷೆ ಕಲಾವತಿ ಕೆ. ಹಾಗೂ ಸಿಬ್ಬಂದಿ ಇಂದು ದಿಢೀರ್ ಕಾರ್ಯಾಚರಣೆ ನಡೆಸಿದ್ದರು.

ಈ ವೇಳೆ ಆರೋಪಿ ಹರೀಶ್ 10 ಸಾವಿರ ರೂ. ತೆಗೆದುಕೊಳ್ಳುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದನು. ಲಂಚದ ಹಣವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಮಂಗಳೂರು ಲೋಕಾಯುಕ್ತ ಪೊಲೀಸ್ ಅಧೀಕ್ಷರ ಲಕ್ಷ್ಮೀ ಗಣೇಶ್ ಕೆ ತಿಳಿಸಿದ್ದಾರೆ.

- Advertisement -

Related news

error: Content is protected !!