Tuesday, May 14, 2024
spot_imgspot_img
spot_imgspot_img

ಉಡುಪಿ: ವಿಪರೀತ ಮದ್ಯಪಾನ ಮಾಡಿ ಯುವಕ ಮೃತ್ಯು

- Advertisement -G L Acharya panikkar
- Advertisement -

ಉಡುಪಿ : ವಿಪರೀತ ಮದ್ಯಪಾನ ಮಾಡಿ ಅಸ್ವಸ್ಥಗೊಂಡು ಯುವಕನೋರ್ವ ಮೃತಪಟ್ಟ ಘಟನೆ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸುರೇಶ್ (28) ಮೃತಪಟ್ಟವರು.

ಇವರು ವಿಪರೀತ ಮದ್ಯಪಾನ ಮಾಡುವ ಅಭ್ಯಾಸ ಹೊಂದಿದ್ದು, ಇದೇ ಕಾರಣದಿಂದ ಇತ್ತೀಚೆಗೆ ತೀರಾ ಆರೋಗ್ಯ ಸಮಸ್ಯೆಗೆ ಒಳಗಾಗಿದ್ದರು. ಡಿ.15 ರಂದು ಬೆಳಿಗ್ಗೆ ಕೆಲಸಕ್ಕೆಂದು ಹೋದವರು ಅಲ್ಲಿ ವಿಪರೀತ ಮದ್ಯಪಾನ ಮಾಡಿ ಅಸ್ವಸ್ಥಗೊಂಡಿದ್ದರು. ಈ ವೇಳೆ ಅವರೊಂದಿಗೆ ಕೆಲಸ ಮಾಡುತ್ತಿದ್ದವರು ಅವರನ್ನು ಮನೆಗೆ ಕರೆದುಕೊಂಡು ಬಂದು ಬಿಟ್ಟಿದ್ದರು. ಆದರೆ ಸಂಜೆ ವೇಳೆ ಮತ್ತೆ ಅವರು ತೀವ್ರ ಅಸ್ವಸ್ಥಗೊಂಡು ಮನೆಯಲ್ಲಿಯೇ ಮೃತಪಟ್ಟಿದ್ದರು. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!