- Advertisement -
- Advertisement -
ಉಡುಪಿ: ವೃದ್ಧೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಸಿದು ಪರಾರಿಯಾಗಲು ಯತ್ನಿಸಿದ ಮೂವರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಉಡುಪಿ ಜಿಲ್ಲೆ ಕಾರ್ಕಳ ತಾಲೂಕು ಸರ್ಕಾರಿ ಆಸ್ಪತ್ರೆ ಬಳಿ ನಡೆದಿದೆ.

ಮೂವರು ಮಂಗಳಮುಖಿಯರಾಗಿದ್ದು, ಕಾರ್ಕಳ ತಾಲೂಕಿನಲ್ಲಿ ಈ ಮಂಗಳಮುಖಿಯರು ಭಿಕ್ಷೆ ಬೇಡುವುದನ್ನೇ ವೃತ್ತಿ ಮಾಡಿಕೊಂಡಿದ್ದರು. ಇವರಲ್ಲಿ ಕೆಲವರು ಕಳ್ಳತನದ ಕೃತ್ಯಕ್ಕೆ ಮುಂದಾಗುತ್ತಿದ್ದರು.

ವೃದ್ಧೆ ಬಿಲ್ ಪಾವತಿಸಲು ಸರದಿ ಸಾಲಿನಲ್ಲಿ ನಿಂತಿದ್ದರು. ಈ ವೇಳೆ ಅವರ ಹಿಂಬದಿಯಲ್ಲಿ ಮೂವರು ಮಂಗಳಮುಖಿಯರು ಚಿನ್ನದ ಸರವನ್ನು ಕಸಿದುಕೊಂಡು ಪರಾರಿಯಾಗಲು ಯತ್ನಿಸಿದ್ದಾರೆ. ಆಗ ವೃದ್ಧೆ ಬೊಬ್ಬೆ ಹಾಕಿದ್ದು, ಇದನ್ನು ಗಮನಿಸಿದ ಸಾರ್ವಜನಿಕರು ಸುಲಿಗೆಕೋರರನ್ನು ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.

- Advertisement -








