Friday, May 17, 2024
spot_imgspot_img
spot_imgspot_img

ಉಡುಪಿ: ವೃದ್ಧೆಯ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದರೋಡೆ; ಹೋಂ ನರ್ಸ್ ಪೊಲೀಸ್ ವಶಕ್ಕೆ

- Advertisement -G L Acharya panikkar
- Advertisement -

ಉಡುಪಿ: ವೃದ್ಧೆಯ ಮನೆಯಲ್ಲಿ ಕೆಲಸಕ್ಕಿದ್ದ ಹೋಂ ನರ್ಸ್ ಒಬ್ಬಳು ತಾನು ಉಂಡ ಮನೆಗೆ ಕೇಡು ಬಗೆದಿದ್ದು, ಮನೆಯೊಡತಿ ವೃದ್ದೆಯ ಲಕ್ಷಾಂತರ ಬೆಳೆ ಬಾಳುವ ಚಿನ್ನಾಭರಣ ದರೋಡೆ ಮಾಡಿದ ಪ್ರಕರಣ ವರದಿಯಾಗಿದ್ದು, ಆರೋಪಿ ಹೋಂ ನರ್ಸ್ ನ್ನು ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆ ಮೂಲದ ರೇಖಾ ಹೆಬ್ಬಳ್ಳಿ ಬಂಧಿತ ಆರೋಪಿ.

ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಚೆನ್ನಿಬೆಟ್ಟು ಮದಗ ನಿವಾಸಿ ವಯೋ ವೃದ್ದೇ ಸರಸ್ವತಿ (98) ಎಂಬವರ ಆರೈಕೆಗೆ ಉಡುಪಿ ಉಷಾ ಮ್ಯಾರೇಜ್ ಬ್ಯುರೋ ಜಾಬ್ ಲಿಂಕ್ಸ್ ಏಜೆನ್ಸಿ ಮೂಲಕ ಹೋಂ ನರ್ಸ್ ಕೆಲಸಕ್ಕೆ ರೇಖಾ ಹೆಬ್ಬಾಳ್ಳಿಯನ್ನು ನೇಮಿಸಿಕೊಳ್ಳಲಾಗಿತ್ತು. ಆದರೆ, ಕೆಲಸಕ್ಕೆ ನೇಮಿಸಿದಾಕೆ ಮನೆಯಲ್ಲಿ ವೃದ್ದೆಯೊಬ್ಬರೇ ಇದ್ದಂತಹ ಸಂದರ್ಭದಲ್ಲಿ ಸರಸ್ವತಿರವರ ಕುತ್ತಿಗೆಯಲ್ಲಿದ್ದ ಸುಮಾರು 1.45 ಲಕ್ಷ ರೂ. ಮೌಲ್ಯದ ಚಿನ್ನದ ಸರವನ್ನು ಕಳವು ಮಾಡಿಕೊಂಡು ಹೋಗಿದ್ದಾಳೆ ಎಂದು ತಿಳಿದುಬಂದಿದೆ.

ಈ ಕುರಿತಂತೆ ಹಿರಿಯಡ್ಕ ಪೊಲೀಸರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

- Advertisement -

Related news

error: Content is protected !!