Tuesday, April 23, 2024
spot_imgspot_img
spot_imgspot_img

ಉಡುಪಿ: ಶಾಂತಿ ಕಾಪಾಡಲು ಪೇಜಾವರ ಶ್ರೀ.ಗಳನ್ನು ಭೇಟಿಯಾದ ಮುಸ್ಲಿಂ ನಿಯೋಗ: ವರ್ತನೆಯನ್ನು ಸರಿಪಡಿಸಿಕೊಂಡು ಬನ್ನಿ; ಖಡಕ್ ಉತ್ತರಕೊಟ್ಟ ಶ್ರೀ

- Advertisement -G L Acharya panikkar
- Advertisement -

ಉಡುಪಿ : ನಾಡಿನಲ್ಲಿ ಹಿಂದೂ ಮುಸ್ಲಿಂ ಸಮುದಾಯದ ನಡುವೆ ಉಂಟಾಗಿರುವ ಕಂದಕಕ್ಕೆ ಸಂಬಂಧಿಸಿ ಸಮಸ್ಯೆ ಪರಿಹಾರಗೊಳಿಸಬೇಕೆಂದು ಅಪೇಕ್ಷಿಸಿ ಭೇಟಿಯಾದ ಮುಸ್ಲಿಂ ನಿಯೋಗಕ್ಕೆ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ತಿಳುವಳಿಕೆಯ ಮಾತುಗಳನ್ನು ಹೇಳಿ ಕಳುಹಿಸಿದ್ದಾರೆ.

ಈಗ ಉಂಟಾಗಿರುವ ಸಮಸ್ಯೆಗಳ ಹಿಂದೆ ಅನೇಕ ವರ್ಷಗಳ ನೋವು ಇದೆ.‌ ಅದಕ್ಕೆ ಕಾರಣ ಯಾರು ಅನ್ನೋದನ್ನು ಆತ್ಮಾವಲೋಕನ ಮಾಡಿಕೊಳ್ಳಿ. ನಿರಂತರ ಗೋ ಸಾಗಾಟ ಗೋಹತ್ಯೆ ಯಾಕೆ ನಿಂತಿಲ್ಲ?. ಜೀವನೋಪಾಯಕ್ಕೆ ಗೋವುಗಳನ್ನು ಸಾಕಿಕೊಂಡು ಬದುಕುತ್ತಿರುವವರ ಮನೆಗೆ ನುಗ್ಗಿ ಬೆದರಿಸಿ ಗೋವುಗಳನ್ನು ಹೊತ್ತೊಯ್ಯುತ್ತಾ ಇದ್ದೀರಿ, ಅಂತಹ ಅನೇಕ ಕಾನೂನು ಬಾಹಿರವಾದ ಕೆಲಸಗಳಿಂದ ನೊಂದಿರುವ ಹಿಂದೂ ಸಮಾಜವನ್ನು ಬಿಟ್ಟು ಶಾಂತಿ ಸೌಹಾರ್ದದ ಮಾತುಕತೆ ಅಥವಾ ಪರಿಹಾರ ನನ್ನೊಬ್ಬನಿಂದ ಸಾಧ್ಯವಿಲ್ಲ ಎಂದಿದ್ದಾರೆ. ಈಗ ಉಂಟಾಗಿರುವ ಪರಿಸ್ಥಿತಿಗೆ ಮೂಲ ಕಾರಣ ಯಾರು ? ಸಮಾಜದಲ್ಲಿ ಕಾನೂನು ಶಾಂತಿ ನೆಮ್ಮದಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ರೀತಿಗಳ ಬಗ್ಗೆ ಆತ್ಮಾವಲೋಕನ‌ ಮಾಡಿಕೊಂಡು ಬನ್ನಿ ಮತ್ತೆ ಮಾತಾಡೋಣ ಎಂದು ಶ್ರೀಗಳು ಮುಸ್ಲಿಂ ನಿಯೋಗಕ್ಕೆ ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದು ಮಠದ ಪ್ರಕಟಣೆ ತಿಳಿಸಿದೆ.

vtv vitla
- Advertisement -

Related news

error: Content is protected !!