Thursday, June 18, 2026
spot_imgspot_img
spot_imgspot_img

ಉಡುಪಿ: ಶಾಲಾ ಬಾಲಕರಿಗೆ ಭದ್ರತಾ ಸಿಬ್ಬಂದಿಯಿಂದ ಲೈಂಗಿಕ ಕಿರುಕುಳ!!

- Advertisement -
- Advertisement -
vtv vitla
vtv vitla

ಉಡುಪಿ: ಶಾಲಾ ಬಾಲಕರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಭದ್ರತಾ ಸಿಬ್ಬಂದಿಯನ್ನು ಉಡುಪಿ ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಜಗನ್ನಾಥ ಆಚಾರಿ ( 54 ) ಎಂದು ಗುರುತಿಸಲಾಗಿದೆ.

ಮೊರಾರ್ಜಿ ದೇಸಾಯಿ ಶಾಲೆಯ ಬಾಲಕರ ಹತ್ತನೇ ತರಗತಿಯ ಏಳು ವಿದ್ಯಾರ್ಥಿಗಳು ಭದ್ರತಾ ಸಿಬ್ಬಂದಿ ಜಗನ್ನಾಥ ಆಚಾರಿ ಕಿರುಕುಳ ನೀಡುತ್ತಿದ್ದ ಕುರಿತು ದೂರು ನೀಡಿದ್ದಾರೆ.

vtv vitla

ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿರುವ ಈ ಶಾಲೆಯ ಮಕ್ಕಳು ಈ ಬಗ್ಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ದೂರು ನೀಡಿದ್ದು, ಉಡುಪಿ ಮಹಿಳಾ ಠಾಣಾ ಪೊಲೀಸರು ಆರೋಪಿ ಜಗನ್ನಾಥ ಆಚಾರಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ನ್ಯಾಯಾಲಯವು ಆರೋಪಿಗೆ ಪೊಲೀಸ್ ಕಸ್ಟಡಿ ನೀಡಿದ್ದು, ಮುಂದೆ ಮತ್ತೆ ನ್ಯಾಯಾಲಯಕ್ಕೆ ಹಾಜರು ಪಡಿಸುವಂತೆ ಆದೇಶಿಸಿದೆ .

vtv vitla
vtv vitla
vtv vitla
vtv vitla
- Advertisement -

Related news

error: Content is protected !!