Saturday, May 11, 2024
spot_imgspot_img
spot_imgspot_img

ಉಡುಪಿ : ಸಿಎಂ ಬೊಮ್ಮಾಯಿ ಹೆಲಿಕಾಪ್ಟರ್ ಲ್ಯಾಂಡ್​ ಆಗುತ್ತಿದ್ದ ಹೆಲಿಪ್ಯಾಡ್ ಬಳಿ ಬೆಂಕಿ

- Advertisement -G L Acharya panikkar
- Advertisement -
vtv vitla

ಉಡುಪಿ : ಸಿಎಂ ಬಸವರಾಜ ಬೊಮ್ಮಾಯಿ ಅವರ ಹೆಲಿಕಾಪ್ಟರ್ ಲ್ಯಾಂಡ್​ ಆಗುತ್ತಿದ್ದ ಹೆಲಿಪ್ಯಾಡ್ ಬಳಿ ಬೆಂಕಿ ಕಾಣಿಸಿಕೊಂಡಿದೆ. ಉಡುಪಿ ಜಿಲ್ಲೆ ಬೈಂದೂರಿನ ಅರೆಶಿರೂರು ಹೆಲಿಪ್ಯಾಡ್​ ಬಳಿ ಮುಖ್ಯಮಂತ್ರಿಗಳ ಎಸ್ಕಾರ್ಟ್​​ ಹೋದ ಬಳಿಕ ಬೆಂಕಿ ಕಾಣಿಸಿಕೊಂಡಿದ್ದು ಕೆಲ ಕ್ಷಣ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಬೈಂದೂರು ಅಗ್ನಿಶಾಮಕದಳ ಸಿಬ್ಬಂದಿ ಕೂಡಲೇ ಬೆಂಕಿ ನಂದಿಸಿದ್ದು ಅರೆಶಿರೂರು ಹೆಲಿಪ್ಯಾಡ್ ಮೂಲಕ ಕೊಲ್ಲೂರಿಗೆ ಸಿಎಂ ಆಗಮಿಸಿದ್ದಾರೆ.

ವಿಧಾನಸಭಾ ಚುನಾವಣೆ ಹಿನ್ನೆಲೆ ಏಪ್ರಿಲ್ 12ರ ರಾತ್ರಿ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೆ ಸಿಎಂ ಬಸವರಾಜ ಬೊಮ್ಮಾಯಿ ಟೆಂಪಲ್ ರನ್ ಶುರು ಮಾಡಿದ್ದಾರೆ. ಹೀಗಾಗಿ ಉಡುಪಿಗೆ ಭೇಟಿ ನೀಡಿದ್ದು ಉಡುಪಿ ಜಿಲ್ಲೆ ಬೈಂದೂರಿನ ಅರೆಶಿರೂರು ಹೆಲಿಪ್ಯಾಡ್​ ಬಳಿ ಮುಖ್ಯಮಂತ್ರಿಗಳ ಎಸ್ಕಾರ್ಟ್​​ ಹೋದ ಬಳಿಕ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಆತಂಕ ಸೃಷ್ಟಿಯಾಗಿದ್ದು ಅದೃಷ್ಟವಶಾತ್ ಸಿಎಂ ಬೊಮ್ಮಾಯಿ ಸ್ವಲ್ಪದರಲ್ಲಿ ಬಚಾವ್ ಆಗಿದ್ದಾರೆ. ಸದ್ಯ ಈಗ ಸಿಎಂ ಬೊಮ್ಮಾಯಿ ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ನಟ ರಿಷಬ್ ಶೆಟ್ಟಿ ಕೂಡ ದೇವಸ್ಥಾನಕ್ಕೆ ಭೇಟಿ ನೀಡಿದ್ದು ಆಕಸ್ಮಿಕವಾಗಿ ಇಬ್ಬರ ಭೇಟಿ ಆಗಿದೆ. ಸಿಎಂರನ್ನು ನೋಡುತ್ತಿದ್ದಂತೆ ನಟ ರಿಷಬ್ ಅವರ ಕಾಲು ಮುಟ್ಟಿ ಆಶೀರ್ವಾದ ಪಡೆದರು. ಆಗ ರಿಷಬ್ ಬೆನ್ನು ತಟ್ಟಿ ಸಿಎಂ ಖುಷಿ ಪಟ್ಟರು.

ಸಿಎಂ ಬಸವರಾಜ ಬೊಮ್ಮಾಯಿ ಉಡುಪಿ ಪ್ರವಾಸದಲ್ಲಿದ್ದು ಸಿಎಂ ಬಂದ್ರೂ ಜಿಲ್ಲೆಯ ಐದು ಶಾಸಕರು ಗೈರಾಗಿದ್ದಾರೆ. ಬೈಂದೂರು ಎಂಎಲ್ಎ ಸುಕುಮಾರ್ ಶೆಟ್ಟಿ ಗೈರಾಗಿದ್ದಾರೆ. ಶಾಸಕ ರಘುಪತಿ ಭಟ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ಕಾಪು ಲಾಲಾಜಿ ಮೆಂಡನ್, ಟಿಕೆಟ್ ತಪ್ಪಿದ್ದಕ್ಕೆ ಬೇಸರದಲ್ಲಿರುವ ಮೂವರು ಶಾಸಕರು ಗೈರಾಗಿದ್ದಾರೆ. ಹಾಗೂ ಶಾಸಕ ಸುನಿಲ್ ಕುಮಾರ್ ಚುನಾವಣೆಯ ಚಟುವಟಿಕೆಯಲ್ಲಿ ನಿರತರಾಗಿದ್ದಾರೆ. ಹೀಗಾಗಿ ಸಿಎಂಗೆ ಕೋಟ ಶ್ರೀನಿವಾಸ ಪೂಜಾರಿ, ಪ್ರಮೋದ್ ಮಧ್ವರಾಜ್ ಸಾಥ್ ನೀಡಿದರು.

- Advertisement -

Related news

error: Content is protected !!