Saturday, June 6, 2026
spot_imgspot_img
spot_imgspot_img

ಉಡುಪಿ: ಸೇತುವೆ ಮೇಲೆ ಬೈಕ್‌ ನಿಲ್ಲಿಸಿ ನಾಪತ್ತೆಯಾದ ವ್ಯಕ್ತಿಯ ಮೃತದೇಹ ಪತ್ತೆ

- Advertisement -
- Advertisement -

ಉಡುಪಿ: ಬ್ರಹ್ಮಾವರ ತಾಲೂಕು ವ್ಯಾಪ್ತಿಯ ಮಾಬುಕಳ ಬ್ರಿಡ್ಜ್ ಬಳಿ ಬೈಕ್ ಇಟ್ಟು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಕೊಡಂಕೂರು ನಿವಾಸಿ ಅಶೋಕ್ ಸುವರ್ಣ(46) ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಶುಕ್ರವಾರ ಮಧ್ಯಾಹ್ನದ ವೇಳೆ ಬ್ರಿಡ್ಜ್ ಮೇಲೆ ಅಶೋಕ್ ಸುವರ್ಣ ಬೈಕ್ ಪತ್ತೆಯಾಗಿತ್ತು. ನಂತರ ಎಷ್ಟೇ ಹುಡುಕಾಟ ನಡೆಸಿದರೂ ಅವರ ಮೃತದೇಹ ಸಿಕ್ಕಿರಲಿಲ್ಲ.

ಇಂದು ಮುಂಜಾನೆಯಿಂದ ಆಪದ್ಭಾಂಧವ ಈಶ್ವರ್ ಮಲ್ಪೆ ಹುಡುಕಾಟ ನಡೆಸಿದಾಗ ಇಂದು ಮಾಬುಕಳದ ಸೀತಾನದಿಯಲ್ಲಿ ಅಶೋಕ್ ಸುವರ್ಣ ಅವರ ಶವ ಪತ್ತೆಯಾಗಿದೆ. ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟಿದ್ದ ಅಶೋಕ್ ಸುವರ್ಣ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

vtv vitla
- Advertisement -

Related news

error: Content is protected !!