Wednesday, May 8, 2024
spot_imgspot_img
spot_imgspot_img

ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ; ಆರೋಪಿ ರಾಜೇಶ್ವರಿ ಶೆಟ್ಟಿಗೆ ಜಾಮೀನು ಮಂಜೂರು

- Advertisement -G L Acharya panikkar
- Advertisement -
vtv vitla
vtv vitla

ಬೆಂಗಳೂರು: ಉಡುಪಿಯ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿ ಜೈಲುವಾಸ ಅನುಭವಿಸುತ್ತಿದ್ದ ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳಿಗೆ ಉಡುಪಿ ನ್ಯಾಯಾಲಯ ವಿಧಿಸಿದ ಜೀವಾವಧಿ ಶಿಕ್ಷೆಯನ್ನು ಪ್ರಶ್ನಿಸಿ ರಾಜೇಶ್ವರಿ ಶೆಟ್ಟಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದು, ಈ ಮೇಲ್ಮನವಿಯ ವಿಚಾರಣೆ ನಡೆಸಿದ ಹೈಕೋರ್ಟ್ ರಾಜೇಶ್ವರಿ ಶೆಟ್ಟಿಗೆ ಜಾಮೀನು ಮಂಜೂರು ಮಾಡಿದೆ. ಉಡುಪಿ ನ್ಯಾಯಾಲಯವು ಕಳೆದ ಜೂನ್ ನಲ್ಲಿ ಮೂವರು ಆರೋಪಿಗಳಾದ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ ಮತ್ತು ರಾಜೇಶ್ವರಿ ಗೆಳೆಯ ಹಾಗೂ ಅರ್ಚಕ ನಿರಂಜನ್ ಭಟ್ ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.
2016ರ ಜುಲೈ 28ರಂದು ಅನಿವಾಸಿ ಭಾರತೀಯ ಉದ್ಯಮಿ ಭಾಸ್ಕರ್​ ಶೆಟ್ಟಿ ಅವರನ್ನು ಉಡುಪಿಯ ಇಂದ್ರಾಳಿಯಲ್ಲಿರುವ ಅವರ ಮನೆಯಲ್ಲಿ ಅವರ ಹೆಂಡತಿ ರಾಜೇಶ್ವರಿ ಶೆಟ್ಟಿ ಹಾಗೂ ಮಗ ನವನೀತ್ ಶೆಟ್ಟಿ ಸೇರಿ ಕೊಲೆ ಮಾಡಿದ್ದರು. ಮೂವರು ಮನೆಯಲ್ಲಿ ಹೋಮ ಮಾಡಿ, ಭಾಸ್ಕರ್ ಶೆಟ್ಟಿ ಶವವನ್ನು ಹೋಮಕುಂಡಕ್ಕೆ ಹಾಕಿ ಸುಟ್ಟುಹಾಕಿದ್ದರು.

vtv vitla
vtv vitla

ಜುಲೈ 31ರಂದು ಭಾಸ್ಕರ್ ಶೆಟ್ಟಿ ಅವರ ತಾಯಿ ತಮ್ಮ ಮಗ ನಾಪತ್ತೆಯಾಗಿದ್ದಾನೆಂದು ಪೊಲೀಸರಿಗೆ ದೂರು ನೀಡಿದ್ದ ಬಳಿಕ ಪ್ರಕರಣ ಬೆಳಕಿಗೆ ಬಂದಿತ್ತು. ಬಳಿಕ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ನಡೆಸಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ, ಅರ್ಚಕ ನಿರಂಜನ್ ಭಟ್, ಆತನ ತಂದೆ ಶ್ರೀನಿವಾಸ್ ಭಟ್, ಮತ್ತು ಕಾರು ಚಾಲಕ ರಾಘವೇಂದ್ರನನ್ನು ಬಂಧಿಸಿದ್ದರು.

ಪ್ರಕರಣದಲ್ಲಿ ನಾಲ್ಕನೇ ಆರೋಪಿ ಅನಾರೋಗ್ಯದಿಂದ ಮೃತಪಟ್ಟಿದ್ದು, ಐದನೇ ಆರೋಪಿ ಚಾಲಕ ರಾಘವೇಂದ್ರನನ್ನು ಕೋರ್ಟ್ ಖುಲಾಸೆಗೊಳಿಸಿತ್ತು. ಹಾಗೂ ಪ್ರಕರಣದವಿಚಾರಣೆ ನಡೆಸಿದ್ದ ಉಡುಪಿ ಜಿಲ್ಲಾ ಸತ್ರ ನ್ಯಾಯಾಲಯವು ರಾಜೇಶ್ವರಿ, ನವನೀತ್ ಶೆಟ್ಟಿ, ನಿರಂಜನ್ ಭಟ್ ಗೆ ಜೀವಾವಧಿ ಶಿಕ್ಷೆ ಪ್ರಕಟಿಸಿತ್ತು.

vtv vitla
vtv vitla
vtv vitla
vtv vitla
- Advertisement -

Related news

error: Content is protected !!