Thursday, July 23, 2026
spot_imgspot_img
spot_imgspot_img

ಉದ್ಯೋಗ ನೈಪುಣ್ಯ ತರಬೇತಿ ಶಿಬಿರದ ಸಮಾರೋಪ ಸಮಾರಂಭ

- Advertisement -
- Advertisement -

ವಿಟ್ಲ: ಇಡ್ಕಿದು ಸೇವಾ ಸಹಕಾರಿ ಸಂಘ ನಿಯಮಿತ, ಅಮೃತ ಸಿಂಚನ ರೈತ ಸೇವಾ ಒಕ್ಕೂಟ ಇಡ್ಕಿದು ಇದರ ವತಿಯಿಂದ ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ.) ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜು, ಪುತ್ತೂರು ಇವರ ಸಹಯೋಗದಲ್ಲಿ ಉದ್ಯೋಗ ನೈಪುಣ್ಯ ತರಬೇತಿ ಶಿಬಿರವು ಮೇ.26 ರಿಂದ ಮೇ.31 ರವರೆಗೆ ಉರಿಮಜಲಿನ ಶತಾಮೃತ ಸಂಕೀರ್ಣದಲ್ಲಿ ನಡೆದು ಸಂಪನ್ನಗೊಂಡಿದೆ.

ಸಮಾರೋಪ ಸಮಾರಂಭದ ದೀಪ ಪ್ರಜ್ವಲನೆಯನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿ ನೆರವೇರಿಸಿದ್ರು. ಅಧ್ಯಕ್ಷತೆಯನ್ನು ಇಡ್ಕಿದು ಸೇವಾ ಸಹಕಾರಿ ಸಂಘ ನಿಯಮಿತ ಇದರ ಅಧ್ಯಕ್ಷ ಸುಧಾಕರ್ ಶೆಟ್ಟಿ ಬೀಡಿನಮಜಲು ಇವರು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್‌ನ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಇಡ್ಕಿದು ಗ್ರಾಮ ಪಂ. ಅಧ್ಯಕ್ಷ ಸುಧೀರ್‍ ಕುಮಾರ್‍ ಶೆಟ್ಟಿ, ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ ಎಂ ಕೃಷ್ಣ ಭಟ್‌ ಕೊಂಕೋಡಿ, ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ವಿಶ್ವೇಶ್ವರ ಭಟ್ ಬಂಗಾರಡ್ಕ ಆಗಮಿಸಿದ್ದರು.

ಈ ವೇಳೆ ಇಡ್ಕಿದು ಸೇವಾ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಈಶ್ವರ ನಾಯ್ಕ, ಉಪಾಧ್ಯಕ್ಷ ಎನ್ ರಾಮ ಭಟ್‌, ಅಮೃತ ಸಿಂಚನ ಸೇವಾ ಒಕ್ಕೂಟದ ಅಧ್ಯಕ್ಷ ಪ್ರಕಾಶ್ ಕೆಎಸ್ ಸೇರಿದಂತೆ ತರಬೇತಿದಾರರು, ಸಿಬ್ಬಂದಿ ವರ್ಗ, ಅಭ್ಯರ್ಥಿಗಳು ಉಪಸ್ಥಿತರಿದ್ದರು. ತರಬೇತಿ ಪಡೆದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ನೀಡಲಾಯಿತು. ಅಭ್ಯರ್ಥಿಗಳು ತಮ್ಮ ಅನಿಸಿಕೆ ಹಂಚಿಕೊಂಡರು.

- Advertisement -

Related news

error: Content is protected !!