Saturday, June 28, 2025
spot_imgspot_img
spot_imgspot_img

ಉಧಾಂಪುರ್ ನಲ್ಲಿ ಸೇನಾ ಹೆಲಿಕಾಪ್ಟರ್ ಪತನ

- Advertisement -
- Advertisement -

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಮಂಗಳವಾರ ಹೆಲಿಕಾಪ್ಟರ್ ಪತನವಾದ ಘಟನೆ ನಡೆದಿದೆ. ಸೇನಾ ಹೆಲಿಕಾಪ್ಟರ್ ಪತನವಾಗಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಇಬ್ಬರು ಪೈಲಟ್‌ಗಳು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಹೆಲಿಕಾಪ್ಟರ್ ಪತನಗೊಂಡಿದೆ ಅಥವಾ ಗುಡ್ಡದ ಮೇಲೆ ಇಳಿಸುವಾಗ ತೊಂದರೆ ಎದುರಾಗಿರಬಹುದು ಎಂದು ಅಂದಾಜಿಸಲಾಗಿದೆ. ಶೋಧ ಕಾರ್ಯಾಚರಣೆಗೆ ತಂಡ ಕಳುಹಿಸಲಾಗಿದ್ದು, ರಕ್ಷಣಾ ತಂಡ ಕೂಡಾ ಸ್ಥಳೀಯರ ನೆರವಿನೊಂದಿಗೆ ಘಟನಾ ಸ್ಥಳಕ್ಕೆ ತೆರಳಿದ್ದು, ಘಟನೆಯಲ್ಲಿ ಗಾಯಗೊಂಡಿದ್ದ ಇಬ್ಬರು ಯೋಧರನ್ನು ಸ್ಥಳಾಂತರಿಸಿ, ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆ ಮಾಡಲಾಗುತ್ತಿದೆ.

ದಟ್ಟ ಮಂಜು ಆವರಿಸಿರುವುದರಿಂದ ಹೆಲಿಕಾಪ್ಟರ್ ಬಿದ್ದಿರುವ ಸ್ಥಳವನ್ನು ನಿರ್ದಿಷ್ಟವಾಗಿ ಗುರುತಿಸುವುದು ಕಷ್ಟವಾಗಿದೆ ಎಂದು ಪೊಲೀಸರು ತಿಳಿಸಿರುವುದಾಗಿ ವರದಿಯಾಗಿದೆ. ಹೆಲಿಕಾಪ್ಟರ್ ಪಟನೀಟಾಪ್ ಸಮೀಪ ಇಳಿಯುತ್ತಿತ್ತು ಎಂದು ಸ್ಥಳೀಯರಿಂದ ತಿಳಿದು ಬಂದಿದೆ.

driving
- Advertisement -

Related news

error: Content is protected !!