Thursday, April 25, 2024
spot_imgspot_img
spot_imgspot_img

ಉಪ್ಪಿನಂಗಡಿ: ಇತ್ತಂಡಗಳ ನಡುವೆ ಮಾರಾಮಾರಿ; 30 ಮಂದಿಯ ವಿರುದ್ಧ FIR ದಾಖಲು!!

- Advertisement -G L Acharya panikkar
- Advertisement -
vtv vitla
vtv vitla

ಉಪ್ಪಿನಂಗಡಿ: ಇತ್ತಂಡಗಳ ನಡುವೆ ಹೊಡೆದಾಟ ನಡೆದ ಘಟನೆ ಡಿ.5ರಂದು ತಡರಾತ್ರಿ ಇಳಂತಿಲ ಗ್ರಾಮದ ಅಂಡೆತ್ತಡ್ಕ ಎಂಬಲ್ಲಿ ನಡೆದಿದೆ. ಈ ಘಟನೆ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, 30 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಅಬ್ದುಲ್ ಜಕಾರಿಯಾ ಎಂಬವರು ನೀಡಿದ ದೂರಿನಂತೆ, ಜಯರಾಮ್, ಸಂದೀಪ್, ಸುಪ್ರೀತ್, ಪ್ರೀತಮ್, ಲತೇಶ್, ಹಾಗೂ ಇನ್ನಿತರರು ಸೇರಿ ಒಟ್ಟು 30 ಜನರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

vtv vitla

ಘಟನೆಯ ವಿವರ:
ಈ ಬಗ್ಗೆ ದೂರು ನೀಡಿರುವ ಮುಹಮ್ಮದ್ ಫಯಾಝ್ ಎಂಬವರು ತಾನು ಭಾನುವಾರ ಸಂಜೆ 7.30ರ ವೇಳೆಗೆ ಅಂಡೆತ್ತಡ್ಕದಲ್ಲಿರುವ ಮಂಜುಶ್ರೀ ಸ್ಟೋರ್‌ಗೆ ತನ್ನ ಸ್ನೇಹಿತ ಅಫೀಝ್‌ನೊಂದಿಗೆ ದಿನಸಿ ಖರೀದಿ ಮಾಡಲು ತೆರಳಿದ್ದು, ಅಲ್ಲಿಗೆ ಬಂದ ಆರೋಪಿಗಳಾದ ಜಯರಾಮ್, ಸಂದೀಪ್, ನವೀನ್, ಕಾರ್ತಿಕ್, ಸುಮಂತ್ ಶೆಟ್ಟಿ, ಪ್ರೀತಮ್, ಲತೇಶ್ ನೂಜಿ ಎಂಬವರು ಕೈಯಲ್ಲಿ ರಾಡ್‌ಗಳನ್ನು ಹಿಡಿದುಕೊಂಡು ಬಂದು ನಮಗೆ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ, ರಾಡ್‌ನಿಂದ ಹಲ್ಲೆ ನಡೆಸಿದ್ದಲ್ಲದೆ, ನಾವು ತಪ್ಪಿಸಿಕೊಂಡು ಓಡಿ ಹೋಗುತ್ತಿರುವಾಗ ದ್ವಿಚಕ್ರ ವಾಹನದಲ್ಲಿ ನಮ್ಮನ್ನು ಅಟ್ಟಾಡಿಸಿಕೊಂಡು ಬಂದಿದ್ದಾರೆ.

ಈ ಸಂದರ್ಭ ಆರೋಪಿ ಜಯರಾಮ ಎಂಬಾತ ನನ್ನನ್ನು ದೂಡಿ ಹಾಕಿದ್ದರಿಂದ ನನ್ನ ಎರಡೂ ಕಾಲಿನ ಮೊಣಗಂಟಿಗೆ ಹಾಗೂ ಕೈಗೆ ಗಾಯವುಂಟಾಗಿದೆ. ಅಲ್ಲದೆ, ನನ್ನ ಕಿಸೆಯಲ್ಲಿದ್ದ ಮೊಬೈಲ್ ಫೋನ್ ಜಖಂಗೊಂಡು ಎಂಟು ಸಾವಿರ ರೂ. ನಷ್ಟವುಂಟಾಗಿದೆ ಎಂದು ತಿಳಿಸಿದ್ದಾರೆ.

vtv vitla
vtv vitla

ಈ ಬಗ್ಗೆ ಇನ್ನೊಂದು ಪ್ರತ್ಯೇಕ ದೂರು ದಾಖಲಿಸಿರುವ ಅಬ್ದುಲ್ ಝಕಾರಿಯಾ ಎಂಬವರು ಭಾನುವಾರ ರಾತ್ರಿ ಸುಮಾರು 8ಗಂಟೆಗೆ ತಾನು ಹಾಗೂ ಸಿದ್ದೀಕ್ ಅವರೊಂದಿಗೆ ಇಕ್ಬಾಲ್ ಜಿ. ಅವರ ದಿನಸಿ ಅಂಗಡಿಯ ಬಳಿ ಇರುವಾಗ ಆರೋಪಿಗಳಾದ ಜಯರಾಮ, ಸಂದೀಪ್, ಸುಪ್ರೀತ್, ಪ್ರೀತಮ್, ಲತೇಶ್ ಹಾಗೂ 30 ಜನ ದ್ವಿಚಕ್ರ ವಾಹನ ಸವಾರರು ಅಲ್ಲಿಗೆ ಕೈಯಲ್ಲಿ ತಲವಾರು, ರಾಡ್‌ಗಳನ್ನು ಹಿಡಿದುಕೊಂಡು ಬಂದಿದ್ದಾರೆ.

ಇವರಲ್ಲಿ ಆರೋಪಿ ಸಂದೀಪ್ ಕುಪ್ಪೆಟ್ಟಿ ಎಂಬಾತನು ಬೈಕ್ನಲ್ಲಿ ಸಹಸವಾರನಾಗಿದ್ದ ಆರೋಪಿ ಜಯರಾಮ ಎಂಬಾತನನಲ್ಲಿ ಸಿದ್ದೀಕ್‌ನನ್ನು ತೋರಿಸಿ ಇವನಾ? ಎಂದು ಕೇಳಿದ್ದು, ಆಗ ಆತ ಇವನಲ್ಲ ಎಂದು ಹೇಳಿದಾಗ ಸಿದ್ದೀಕ್‌ಗೆ ಕೈಗೆ, ಬೆನ್ನಿಗೆ ಆರೋಪಿಗಳು ತಲವಾರಿನಿಂದ ಹಲ್ಲೆಗೈದಿದ್ದಾರೆ. ಆಗ ಇತರರು ರಾಡ್‌ನಿಂದ ಹಲ್ಲೆ ನಡೆಸಿದ್ದಾರೆ.

vtv vitla
vtv vitla

ಆ ಸಂದರ್ಭ ಅವರ ತಂಡದ ಒಬ್ಬಾತ ನನ್ನನ್ನು ಹಿಡಿದುಕೊಂಡಿದ್ದು, ಜಯರಾಮನು ತನ್ನ ತಲೆಯ ಹಿಂಭಾಗಕ್ಕೆ ಕಡಿದಾಗ, ಸಂದೀಪ್ ಎಂಬಾತ ತನಗೆ ರಾಡ್‌ನಿಂದ ಕೈಗೆ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಲಾಗಿದೆ.

ಈ ಸಂದರ್ಭ ನಾನು ಹಾಗೂ ಸಿದ್ದೀಕ್ ಅವರಿಂದ ತಪ್ಪಿಸಿಕೊಂಡು ಓಡಿಹೋಗುತ್ತಿದ್ದಾಗ ನಮ್ಮನ್ನು ಆರೋಪಿಗಳು ದ್ವಿಚಕ್ರ ವಾಹನಗಳಲ್ಲಿ ಹಿಂಬಾಲಿಸಿಕೊಂಡು ಬಂದಿದ್ದು, ಆಗ ದಾರಿಯಲ್ಲಿ ನಡೆದುಕೊಂಡು ಬರುತ್ತಿದ್ದ ಅಯೂಬ್ ಖಾನ್‌ರ ತಲೆಯ ಭಾಗಕ್ಕೂ ಆರೋಪಿ ಜಯರಾಮ ಕಡಿದು, ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಬಳಿಕ ಆಸುಪಾಸಿನ ಜನರು ಸೇರುವುದನ್ನು ಕಂಡು ಆರೋಪಿಗಳು ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಗಾಯಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪುತ್ತೂರು ಸರಕಾರಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

vtv vitla
vtv vitla
- Advertisement -

Related news

error: Content is protected !!