Monday, June 15, 2026
spot_imgspot_img
spot_imgspot_img

ಉಪ್ಪಿನಂಗಡಿ: ಗೂಡ್ಸ್‌ ರಿಕ್ಷಾಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಇಬ್ಬರು ಗಂಭೀರ

- Advertisement -
- Advertisement -
vtv vitla

ಉಪ್ಪಿನಂಗಡಿ: ಗೂಡ್ಸ್ ರಿಕ್ಷಾವೊಂದರ ಹಿಂಬದಿಗೆ ದ್ವಿಚಕ್ರ ವಾಹನ ಢಿಕ್ಕಿ ಹೊಡೆದು ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ತಣ್ಣೀರುಪಂಥ ಗ್ರಾ.ಪಂ. ವ್ಯಾಪ್ತಿಯ ಶಿವಗಿರಿ ಜಂಕ್ಷನ್ ಬಳಿ ನಡೆದಿದೆ.

ಗಾಯಗೊಂಡ ದ್ವಿಚಕ್ರ ವಾಹನ ಸವಾರರನ್ನು ಅಬೂಬಕ್ಕರ್ ಸಿದ್ದೀಕ್ ಹಾಗೂ ಮುಹಮ್ಮದ್ ಕಲೀಲ್ ಎಂದು ಗುರುತಿಸಲಾಗಿದೆ.

ಇವರು ಮೂಲತಃ ಕುಪ್ಪೆಟ್ಟಿಯವರಾಗಿದ್ದು, ಇವರು ದಿಚಕ್ರ ವಾಹನದಲ್ಲಿ ಕರಾಯ ಕಡೆಯಿಂದ ಕುಪ್ಪೆಟ್ಟಿ ಕಡೆಗೆ ಹೋಗುತ್ತಿದ್ದರು ಎನ್ನಲಾಗಿದೆ. ಗೂಡ್ಸ್ ರಿಕ್ಷಾಕ್ಕೆ ದ್ವಿಚಕ್ರ ವಾಹನ ಢಿಕ್ಕಿ ಹೊಡೆದ ಕಾರಣ ರಸ್ತೆಗೆಸೆಯಲ್ಪಟ್ಟು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಪುತ್ತೂರಿನ ಆಸ್ಪತ್ರೆಗೆ ಸಾಗಿಸಿ ಹೆಚ್ಚಿನಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Related news

error: Content is protected !!