Sunday, July 6, 2025
spot_imgspot_img
spot_imgspot_img

ಉಪ್ಪಿನಂಗಡಿ ಠಾಣೆಯ ಪೋಲೀಸರ ಮೇಲೆ ಹಲ್ಲೆ ನಡೆಸಿದ ಆರೋಪಿಗಳಿಗೆ ರಕ್ಷಣೆ ನೀಡುತ್ತಿರುವ ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಯ ಮೇಲೆ ಕ್ರಮ ಕೈಗೊಳ್ಳಲು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ- ಬಜರಂಗದಳ

- Advertisement -
- Advertisement -
vtv vitla
vtv vitla

ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ಡಿಸೆಂಬರ್ 14ರಂದು ಪ್ರಕರಣಕ್ಕೆ ಸಂಬಂಧಿಸಿದಂತೆ PFI – SDPI ನ ಕಾರ್ಯಕರ್ತರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ನುಗ್ಗಿ, ಪೋಲೀಸರ ಮೇಲೆ ದಾಳಿ ನಡೆಸಿದ್ದು, ತಲವಾರು ಮಾರಕಾಸ್ತ್ರಗಳನ್ನು ಹಿಡಿದು ದಾಳಿಮಾಡಿ ಪೊಲೀಸರಿಗೆ ಹಲ್ಲೆ ನಡೆಸಿದ ಸಂಧರ್ಭದಲ್ಲಿ ಪೊಲೀಸರು ನಡೆಸಿದ ಲಾಠಿ ಚಾರ್ಜ್ ನಲ್ಲಿ ಅಲ್ಪ ಸ್ವಲ್ಪ ಗಾಯಗೊಂಡ 25 ಕ್ಕೂ ಹೆಚ್ಚು PFI ಕಾರ್ಯಕರ್ತರು ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

vtv vitla

ದಾಖಲಾದ ಎಲ್ಲಾ ಜನರ ಮೇಲೆ ಉಪ್ಪಿಮಂಗಡಿ ಪೊಲೀಸ್ ಠಾಣೆಯ ಪ್ರಕರಣದಲ್ಲಿ ಕೇಸು ದಾಖಲಾಗಿದ್ದು ಆದರೆ ಸುಳ್ಳು ಆರೋಗ್ಯದ ನೆಪವೊಡ್ಡಿ ಆರೋಪಿಗಳಿಗೆ ಹೈಲ್ಯಾಂಡ್ ಆಸ್ಪತ್ರೆ ರಕ್ಷಣೆ ಕೊಡುತ್ತಿದ್ದು, ಪೊಲೀಸರಿಗೆ ಆರೋಪಿಗಳನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಿ ಒಪ್ಪಿಸಲು ನಿರಾಕರಿಸುತ್ತಿದೆ.

ಪೋಲೀಸರ ಮೇಲೆ ಕೊಲೆ ನಡೆಸಲು ಹುನ್ನಾರ ನಡೆಸಿದ ಆರೋಪಿಗಳಿಗೆ ಹೈಲ್ಯಾಂಡ್ ಆಸ್ಪತ್ರೆಯ ಮಂಡಳಿ ರಕ್ಷಣೆ ಕೊಡುತ್ತಿದ್ದು ಆ ಆಸ್ಪತ್ರೆಯ ಮೇಲೆ ಕ್ರಮಕೈಗೊಳ್ಳಲು ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಮನವಿ ನೀಡಲಾಯಿತು.ತಕ್ಷಣ ಆರೋಪಿಗಳನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಿ ಪೊಲೀಸರಿಗೆ ಒಪ್ಪಿಸದಿದ್ದಲ್ಲಿ ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಯ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಬಜರಂಗದಳ ವಿಭಾಗ ಸಂಚಾಲಕ್ ಭುಜಂಗ ಕುಲಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

vtv vitla
vtv vitla
- Advertisement -

Related news

error: Content is protected !!