Saturday, July 25, 2026
spot_imgspot_img
spot_imgspot_img

ಉಪ್ಪಿನಂಗಡಿ: ಪಿಯುಸಿ ವಿದ್ಯಾರ್ಥಿ ನದಿಯಲ್ಲಿ ಮುಳುಗಿ ಮೃತ್ಯು

- Advertisement -
- Advertisement -

ಉಪ್ಪಿನಂಗಡಿ: ಮೀನು ಹಿಡಿಯಲೆಂದು ತೆರಳಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕೆಂಪಿಮಜಲು ಎಂಬಲ್ಲಿನ ನೇತ್ರಾವತಿ ನದಿಯ ಸನ್ಯಾಸಿ ಕಯ ಎಂಬ ಪ್ರದೇಶದಲ್ಲಿ ಎಂಬಲ್ಲಿ ನಡೆದಿದೆ.

ಬಜತ್ತೂರು ನಿವಾಸಿ ಓಡಿಯಪ್ಪ ಎಂಬವರ ಪುತ್ರ, ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ರೂಪೇಶ್ (17) ಸಾವನ್ನಪ್ಪಿದ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.

ಇಳಂತಿಲ ಗ್ರಾಮದ ಕಟ್ಟೆಚ್ಚಾರ್ ಎಂಬಲ್ಲಿನ ತನ್ನ ಸಂಬಂಧಿಕರ ಮನೆಗೆ ಬಂದಿದ್ದ ಈತ ತನ್ನ ಸಂಬಂಧಿ ಅಖಿಲೇಶ್ ಎಂಬಾತನೊಂದಿಗೆ ನೇತ್ರಾವತಿ ನದಿಯ ಸನ್ಯಾಸಿ ಕಯದಲ್ಲಿ ಮೀನು ಹಿಡಿಯಲೆಂದು ತೆರಳಿದ್ದ. ನದಿಯಲ್ಲಿ, ಈಜು ಬಾರದೆ ನೀರಿನಲ್ಲಿ ಮುಳುಗಿ ಅಸ್ವಸ್ಥನಾಗಿದ್ದು, ಜೊತೆಗಿದ್ದ ಅಖಿಲೇಶ್ ಆತನನ್ನು ನೀರಿನಿಂದ ಮೇಲೆತ್ತಿ ಆಸ್ಪತ್ರೆಗೆ ದಾಖಲಿಸಿದ್ದು, ಆದರೆ ಅಷ್ಟರಲ್ಲಿ ಆತ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

Related news

error: Content is protected !!