Wednesday, May 8, 2024
spot_imgspot_img
spot_imgspot_img

ಉಪ್ಪಿನಂಗಡಿ: ಮನೆಯಂಗಳದಲ್ಲಿ ಆಟವಾಡುತ್ತಿದ್ದ ವೇಳೆ ಮೈಮೇಲೆ ಕಲ್ಲಿನ ಅಟ್ಟಿ ಮಗುಚಿ ಬಿದ್ದು ಮೂರು ವರ್ಷದ ಮಗು ದಾರುಣ ಸಾವು

- Advertisement -G L Acharya panikkar
- Advertisement -
vtv vitla
vtv vitla

ಉಪ್ಪಿನಂಗಡಿ: ಅಂಗಳದಲ್ಲಿಟ್ಟಿದ್ದ ಕೆಂಪು ಕಲ್ಲು ಕುಸಿದು ಮೂರು ವರ್ಷದ ಮಗುವಿನ ಮೈಮೇಲೆ ಬಿದ್ದು, ಮಗು ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಕುಪ್ಪೆಟಿ ಎಂಬಲ್ಲಿ ನಡೆದಿದೆ.

ಮೃತ ಮಗುವನ್ನು ಕುಪ್ಪೆಟಿ ನಿವಾಸಿ ಅಶ್ರಪ್ ರವರ ಪುತ್ರ ಮೂರು ವರ್ಷದ ಮಹಮ್ಮದ್ ನೌಷೀರ್ ಎನ್ನಲಾಗಿದೆ.

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮಗು ಮನೆ ಹೊರಗಡೆ ಆಟ ಆಡುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಅಶ್ರಪ್ ಅವರ ಮನೆಯ ಕಾಮಗಾರಿ ನಡೆಯುತ್ತಿದ್ದು, ಇದಕ್ಕಾಗಿ ಕಲ್ಲು ತಂದು ಇಡಲಾಗಿತ್ತು. ಆಕಸ್ಮಿಕವಾಗಿ ಕಲ್ಲು ಜಾರಿ ಮಗವಿನ ಮೇಲೆ ಬಿದ್ದಿದೆ. ಘಟನೆಯಿಂದ ಗಂಭೀರ ಗಾಯಗೊಂಡಿದ್ದ ಮಗುವನ್ನು ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದಾಗ ಮೃತಪಟ್ಟಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!