Thursday, May 2, 2024
spot_imgspot_img
spot_imgspot_img

ಉಪ್ಪಿನಂಗಡಿ: ವ್ಯಾಪಾರ ಮಳಿಗೆಗಳ ಹೆಸರು ಬಳಸಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ರವಾನೆ; ಪೊಲೀಸ್ ಠಾಣೆಗೆ ದೂರು..!

- Advertisement -G L Acharya panikkar
- Advertisement -

ಉಪ್ಪಿನಂಗಡಿ: ವ್ಯಾಪಾರ ಮಳಿಗೆಯ ಹೆಸರನ್ನು ಬಳಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಹರಡಿ ಮತೀಯ ಸಂಘರ್ಷವನ್ನು ಮಾಡಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ವರ್ತಕರೊಬ್ಬರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಶಾಂತಿ ಭಂಗ ಹಾಗೂ ಮತೀಯ ದ್ವೇಷ ಮೂಡಿಸುವ ರೀತಿಯಲ್ಲಿ ದುಷ್ಕರ್ಮಿಗಳು ಸಂದೇಶವೊಂದನ್ನು ಸೃಷ್ಟಿಸಿಕೊಂಡು ಅದರಲ್ಲಿ ವ್ಯಾಪಾರ ಮಳಿಗೆಯ ಹೆಸರನ್ನು ಬಳಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಹರಡಿ ಮತೀಯ ಸಂಘರ್ಷವನ್ನು ಮಾಡಲು ಯತ್ನಿಸುತ್ತಿದ್ದಾರೆ.

vtv vitla
vtv vitla

ಸುಮಾರು 32 ಹಿಂದೂ ಸಮುದಾಯದ ಅಂಗಡಿಗಳ ಹೆಸರನ್ನು ಬಳಸಿ “ನಮ್ಮ ಅಂಗಡಿಗಳಿಂದ ಯಾವುದೇ ಸಾಮಗ್ರಿಗಳನ್ನು ಮುಸ್ಲಿಂಮರಿಗೆ ಕೊಡುವುದಿಲ್ಲ, ನಮಗೆ ಹಿಂದೂ ಸಹೋದರರ ವ್ಯಾಪಾರ ಧಾರಾಳ”, ಎಂದು ಬರೆದು ಪ್ರಸಕ್ತ ಸನ್ನಿವೇಶದಲ್ಲಿ ಮತೀಯ ಸಂಘರ್ಷವನ್ನು ಉಂಟು ಮಾಡುವ ಹುನ್ನಾರದಿಂದ ನಡೆಸಿದ ಷಡ್ಯಂತ್ರವಾಗಿದ್ದು, ಸುಳ್ಳು ಸುದ್ದಿಯನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಿದ್ದಾರೆ.

vtv vitla
vtv vitla
- Advertisement -

Related news

error: Content is protected !!