Friday, March 29, 2024
spot_imgspot_img
spot_imgspot_img

ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಳ್ಳತನ; ಪ್ರಕರಣ ದಾಖಲು

- Advertisement -G L Acharya panikkar
- Advertisement -

ಉಪ್ಪಿನಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಬೀಗ ಮುರಿದು ಒಳ ನುಗ್ಗಿದ ದುಷ್ಕರ್ಮಿಗಳು ಕಳ್ಳತನ ನಡೆಸಿದ್ದಾರೆ.

ಕಾಲೇಜಿನಲ್ಲಿ ಪ್ರಸ್ತುತ ವಾರ್ಷಿಕ ಪರೀಕ್ಷೆ ನಡೆಯುತ್ತಿದ್ದು, ಕಾಲೇಜಿನ ಕೆಮಿಸ್ಟ್ ಲ್ಯಾಬ್ ಕೊಠಡಿಯ ಬೀಗ ಮುರಿದು ಒಳ ನುಗ್ಗಿದ ದುಷ್ಕರ್ಮಿಗಳು ಕೊಠಡಿಯಲ್ಲಿದ್ದ ಅಲ್ಮೇರಾದ ಬಾಗಿಲು ಮುರಿಯಲು ಯತ್ನಿಸಿದ್ದಾರೆ. ಅದಕ್ಕೆ ಸಂಬಂಧಿಸಿದ ಬೀಗದ ಕೀ ಯನ್ನು ಸಿಗದೇ ಇದ್ದಾಗ ನಾಲ್ಕೆದು ಡ್ರಾಯರ್ ಗಳ ಬೀಗ ಮುರಿದಿದ್ದಾರೆ.

ಕಚೇರಿಯೊಳಗೆ ಜಾಲಾಡಿದ ರೀತಿ ನೋಡಿದಾಗ ಪರೀಕ್ಷಾ ಪ್ರಶ್ನೆಪತ್ರಿಕೆಗಾಗಿ ಈ ಕಳವು ಯತ್ನ ನಡೆದಿರಬಹುದೇ ಎಂಬ ಶಂಕೆ ಮೂಡಿದೆ. ಪ್ರಶ್ನಾ ಪತ್ರಿಕೆಗಳನ್ನು ರಕ್ಷಿಸಿ ಇಡಲಾದ ಕವಾಟಿನ ಬೀಗವು ಪ್ರಾಂಶುಪಾಲರ ಬಳಿಯಲ್ಲಿಯೇ ಇದ್ದ ಕಾರಣ ಹಾಗೂ ಕವಾಟು ಒಂದಷ್ಟು ಭದ್ರತಾ ವ್ಯವಸ್ಥೆಯ ಹಿನ್ನೆಲೆಯಲ್ಲಿ ಪ್ರಶ್ನಾಪತ್ರಿಕೆಯ ಕಳವು ಸಾಧ್ಯವಾಗಿಲ್ಲ.

ಇದೇ ವೇಳೆ ಕಾಲೇಜಿನಲ್ಲಿದ್ದ ಕೆಲವು ದೀಪಕಂಬಗಳ ಸಹಿತ ವಸ್ತುಗಳನ್ನು ಕಡೆಯಿರುವುದು ಕಂಡು ಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸ್‌ ಇಲಾಖೆಯ ಬೆರಳನ್ನು ತಜ್ಞರು, ಶ್ವಾನ ದಳ ಭೇಟಿ ನೀಡಿದ್ದು, ಕಾಲೇಜಿನ ಪ್ರಾಂಶುಪಾಲ ಶೇಖರ್‌ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿರುವ ಪೊಲೀಸರಿಂದ ತನಿಖೆ ನಡೆಯುತ್ತಿದೆ.

vtv vitla
- Advertisement -

Related news

error: Content is protected !!