Sunday, May 5, 2024
spot_imgspot_img
spot_imgspot_img

ಉಪ್ಪಿನಂಗಡಿ: ಹಿಜಾಬ್ ವರದಿಗೆ ತೆರಳಿದ ಮಾಧ್ಯಮದವರ ಮೇಲೆ ಹಲ್ಲೆ ಪ್ರಕರಣ; 25 ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು..!

- Advertisement -G L Acharya panikkar
- Advertisement -

ಉಪ್ಪಿನಂಗಡಿ: ಸರಕಾರಿ ಕಾಲೇಜಿನಲ್ಲಿ ನಡೆದ ಹಿಜಾಬ್ ಪ್ರಕರಣದ ವರದಿ ಸಂಗ್ರಹಿಸಲು ತೆರಳಿದ ಮಾಧ್ಯಮದವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮಾಧ್ಯಮ ಪ್ರತಿನಿಧಿಯೋರ್ವರು ನೀಡಿದ ದೂರಿನಂತೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಖಾಸಗಿ ಮಾಧ್ಯಮದ ವರದಿಗಾರ ಮಂಗಳೂರು ಕೋಟೆಕಾರ್ ಮಾಡೂರು ನಿವಾಸಿ ಅಜಿತ್ ಕುಮಾರ್(44) ರವರು ನೀಡಿದ ದೂರಿನಂತೆ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ 25 ಮಂದಿ ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲಾಗಿದೆ.

ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆಯ ಕಾಲೇಜಿನಲ್ಲಿಹಿಜಾಬ್ ಹಿನ್ನಲೆಯಲ್ಲಿ ಸಂಘರ್ಷ ಉಂಟಾದ ಬಗ್ಗೆ ಮಾಹಿತಿ ಬಂದ ಮೇರೆಗೆ ಪ್ರಾಂಶುಪಾಲರನ್ನು ಭೇಟಿಯಾಗಿ ಮಾಹಿತಿ ಪಡೆದುಕೊಂಡು ಹಿಂತಿರುಗುವ ಸಮಯ ಸುಮಾರು 25 ವಿದ್ಯಾರ್ಥಿಗಳ ಗುಂಪು ಸುತ್ತುವರಿದು ತಲ್ಲಾಟ ನಡೆಸಿ ಹಲ್ಲೆ ನಡೆಸುತ್ತಾ ಕಾಲೇಜಿನ ಕ್ಯಾಂಪಸ್ ನಲ್ಲಿ ದಿಗ್ಧಂಧನ ವಿಧಿಸಿರುತ್ತಾರೆ.

ಈ ವಿಚಾರವನ್ನು ಹೊರಗಡೆ ಯಾರಿಗಾದರೂ ತಿಳಿಸಿದರೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿರುತ್ತಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಠಾಣೆಯಲ್ಲಿ ಅ.ಕ್ರ 68/2022 ಕಲಂ: 143, 323, 342, 506 ಜೊತೆಗೆ 149 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!