Monday, April 29, 2024
spot_imgspot_img
spot_imgspot_img

ಉಳ್ಳಾಲ: ಅಪ್ರಾಪ್ತೆಗೆ ಕಿರುಕುಳ ನೀಡಿದ ಆರೋಪ; ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು- ಆರೋಪಿ ಪರಾರಿ

- Advertisement -G L Acharya panikkar
- Advertisement -

ಉಳ್ಳಾಲ: ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ರಿಕ್ಷಾ ಚಾಲಕನ ವಿರುದ್ಧ ಉಳ್ಳಾಲದ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಅಂಬ್ಲಮೊಗರು ನಿವಾಸಿ ಇಕ್ಬಾಲ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿ ತಲೆಮರೆಸಿಕೊಂಡಿದ್ದಾನೆ.

ಬಸ್ಸಿಗಾಗಿ ಕಾಯುವ ಸಂದರ್ಭ ಮಾತನಾಡಿಸಲು ಯತ್ನಿಸಿದ್ದ ರಿಕ್ಷಾ ಚಾಲಕ ವಿದ್ಯಾರ್ಥಿನಿ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದನು. ಜೂನ್ ತಿಂಗಳಲ್ಲಿ ನಡೆದ ಘಟನೆ ಕುರಿತು ಅಪ್ರಾಪ್ತೆ ಹೆತ್ತವರಲ್ಲಿ ಇತ್ತೀಚೆಗೆ ತಿಳಿಸಿದ್ದಳು. ಕೂಡಲೇ ಹೆತ್ತವರು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ತಲೆಮರೆಸಿಕೊಂಡಿದ್ದಾನೆ. ಆರೋಪಿ ವಿವಾಹಿತನಾಗಿದ್ದಾನೆ. ಕೊಣಾಜೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

- Advertisement -

Related news

error: Content is protected !!