Sunday, May 19, 2024
spot_imgspot_img
spot_imgspot_img

ಉಳ್ಳಾಲ: ಟಯರ್ ಸಿಡಿದು ಪಲ್ಟಿಯಾದ ಮೀನು ಸಾಗಾಟ ಟೆಂಪೋ

- Advertisement -G L Acharya panikkar
- Advertisement -

ಉಳ್ಳಾಲ: ಮೀನು ಸಾಗಾಟ ನಡೆಸುತ್ತಿದ್ದ ಟೆಂಪೋ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ತೊಕ್ಕೊಟ್ಟು ಕಲ್ಲಾಪು ಎಂಬಲ್ಲಿ ಘಟನೆ ನಡೆದಿದೆ

ಲಾರಿ ಚಾಲಕ ಸಾದಿಕ್ ಸ್ವಲ್ಪ ಗಾಯದಿಂದ ಪಾರಾಗಿದ್ದಾರೆ. ಮಂಗಳೂರು ಧಕ್ಕೆಯಿಂದ ಉಳ್ಳಾಲ ಫಿಷ್ ಮಿಲ್ ಗೆ ಮೀನು ಸಾಗಾಟ ನಡೆಸುತ್ತಿದ್ದ ಟೆಂಪೋ, ಚಾಲಕನ ನಿಯಂತ್ರಣ ತಪ್ಪಿ ವಾಲಿದ್ದು, ಈ ವೇಳೆ ಟಯರ್ ಸಿಡಿದು ರಸ್ತೆಗೆ ಉರುಳಿದೆ.

ಘಟನೆಯಿಂದ ರಸ್ತೆಯಲ್ಲಿ ಮೀನು ಚಲ್ಲಾಪಿಲ್ಲಿಯಾಗಿ ಹರಡಿಕೊಂಡಿದ್ದು ರಸ್ತೆ ಸಂಚಾರದಲ್ಲಿ ಅಡಚಣೆಯುಂಟಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣಾ ಪೊಲೀಸರು ತೆರವು ಕಾರ್ಯಾಚರಣೆ ನಡೆಸಿದ್ದಾರೆ.

https://www.youtube.com/live/2lrEtn_kC2U?feature=share


.

- Advertisement -

Related news

error: Content is protected !!