Saturday, April 20, 2024
spot_imgspot_img
spot_imgspot_img

ಉಳ್ಳಾಲ: ತಡರಾತ್ರಿ ಭೀಕರ ಅಪಘಾತ; ಓರ್ವ ಮೃತ್ಯು, ಇನ್ನೋರ್ವ ಗಂಭೀರ, ಇಬ್ಬರು ಯುವತಿಯರಿಗೆ ಗಾಯ..!!

- Advertisement -G L Acharya panikkar
- Advertisement -

ಉಳ್ಳಾಲ : ಮಂಗಳೂರು ಹೊರವಲಯದ ಉಳ್ಳಾಲದ ರಾ.ಹೆ. 66 ರಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡಿದ್ದು, ಇಬ್ಬರು ಯುವತಿಯರು ಸಣ್ಣ ಗಾಯಗಳೊಂದಿಗೆ ಪಾರಾಗಿರುವ ಘಟನೆ ಕೊಲ್ಯ- ಅಡ್ಕ ಬಳಿ ಸಂಭವಿಸಿದೆ.

ಉಪ್ಪಳ ಹಿದಾಯತ್ ನಗರ ನಿವಾಸಿ ಬಷಾರ ಅಹಮ್ಮದ್ (22) ಮೃತರಾಗಿದ್ದಾರೆ. ಇನ್ನೋರ್ವ ಗಾಯಾಳು ಗುರುತು ಪತ್ತೆಯಾಗಿಲ್ಲ. ಕೇರಳ ಕಣ್ಣೂರು ನಿವಾಸಿ ಫಾತಿಮ ಹಾಗೂ ರೇವತಿ ಎಂಬವರಿಗೆ ಗಾಯಗಳಾಗಿವೆ. ನಾಲ್ವರಿದ್ದ ಕಾರು ಕೊಲ್ಯ- ಅಡ್ಕ ಬಳಿ ರಸ್ತೆ ವಿಭಜಕವನ್ನು ಏರಿ, ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಸಂಪೂರ್ಣ ನುಜ್ಜುಗುಜ್ಜಾಗಿದೆ. ಈ ಸಂದರ್ಭ ಕಾರು ಚಲಾಯಿಸುತ್ತಿದ್ದ ಬಷಾರ ಅಹಮ್ಮದ್ ಅದರೊಳಕ್ಕೆ ಸಿಲುಕಿ, ತಲೆ ಸೇರಿದಂತೆ ದೇಹಕ್ಕೆ ಸಂಪೂರ್ಣ ಗಾಯಗೊಂಡು ಒಳಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ‌. ಇನ್ನುಳಿದ ಮೂವರನ್ನು ಸ್ಥಳೀಯರು ಸೇರಿ ಕಾರಿನಿಂದ ಹಲವು ನಿಮಿಷಗಳ ಕಾಲ ಕಾರ್ಯಾಚರಣೆ ನಡೆಸಿ ಹೊರತೆಗೆದಿದ್ದಾರೆ.

ಈ ಪೈಕಿ ಓರ್ವ ಯುವತಿಯನ್ನು ಕಾರಿನಲ್ಲಿ ಪ್ರಶಾಂತ್ ಗಟ್ಟಿ ಎಂಬವರು ಎ.ಜೆ ಆಸ್ಪತ್ರೆಗೆ ಕೊಂಡೊಯ್ದು ಮಾನವೀಯತೆ ಮೆರೆದರೆ, ಇನ್ನೋರ್ವಳನ್ನು ಟಿ.ಟಿ ಮೂಲಕ ಅದೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಾಳುವನ್ನು ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಗಾಯಾಳು ಪೈಕಿ ಫಾತಿಮ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯ ವಿದ್ಯಾರ್ಥಿನಿಯಾಗಿದ್ದಾರೆ. ನಾಲ್ವರು ಗೆಳೆಯರಾಗಿದ್ದರೆಂದು ತಿಳಿದುಬಂದಿದೆ.

ಸ್ಥಳೀಯರಿಂದ ಪೊಲೀಸರ ತರಾಟೆ :

ಅಪಘಾತ ನಡೆದ ಸ್ಥಳಕ್ಕೆ ಸಂಚಾರಿ ಹಾಗೂ ಉಳ್ಳಾಲ ಠಾಣಾ ಪೊಲೀಸರು ತಡವಾಗಿ ಆಗಮಿಸಿದ್ದರು ಎಂದು ಆರೋಪಿಸಿ ಸಾರ್ವಜನಿಕರು ತರಾಟೆಗೆ ತೆಗೆದುಕೊಂಡರು. ಅಲ್ಲದೆ ಬ್ಯಾರಿಕೇಡ್ ಅಳವಡಿಸುವ ಕುರಿತು ಹಲವು ಸಮಯದಿಂದ ಹೇಳುತ್ತಾ ಬಂದಿದ್ದರೂ, ಸ್ಲಂದನೆ ಸಿಕ್ಕಿಲ್ಲ ಎಂದು ಆರೋಪಿಸಿದರು. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!