Monday, April 29, 2024
spot_imgspot_img
spot_imgspot_img

ಉಳ್ಳಾಲ: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಜೊತೆ ಅಸಭ್ಯ ವರ್ತನೆ; ಬಸ್ ಕ್ಲೀನರ್ ಮುಹಮ್ಮದ್ ಇಮ್ರಾನ್ ಬಂಧನ

- Advertisement -G L Acharya panikkar
- Advertisement -
vtv vitla

ಉಳ್ಳಾಲ: ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕರೊಬ್ಬರ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದಲ್ಲಿ ಬಸ್ ಕ್ಲೀನರ್‌ನನ್ನು ಉಳ್ಳಾಲ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಜ್ಪೆ ಕೆಂಜೂರು ನಿವಾಸಿ, ಬಸ್ ಕ್ಲೀನರ್ ಮುಹಮ್ಮದ್ ಇಮ್ರಾನ್(26) ಬಂಧಿತ ಆರೋಪಿ.

ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕರ್ತವ್ಯದಲ್ಲಿರುವ ವೈದ್ಯೆಯೊಬ್ಬರು ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದು, ಬಸ್ ಮುಂಜಾನೆ ಉಳ್ಳಾಲ ಠಾಣಾ ವ್ಯಾಪ್ತಿಗೆ ತಲುಪಿದಾಗ ಬಸ್ ಕ್ಲೀನರ್ ಮುಹಮ್ಮದ್ ಇಮ್ರಾನ್ ತಾನು ಧರಿಸಿದ್ದ ಪ್ಯಾಂಟ್ ನ ಜಿಪ್ ತೆಗೆದು ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ವೈದ್ಯೆ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿರುವ ಉಳ್ಳಾಲ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

- Advertisement -

Related news

error: Content is protected !!