Monday, April 29, 2024
spot_imgspot_img
spot_imgspot_img

ಉಳ್ಳಾಲ : ಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆ, ಪೊಲೀಸರ ದಾಳಿ ; ನಾಲ್ವರು ಅರೆಸ್ಟ್ , ಓರ್ವ ಪರಾರಿ

- Advertisement -G L Acharya panikkar
- Advertisement -

ಉಳ್ಳಾಲ : ಇಲ್ಲಿನ ಪಂಡಿತ್ ಹೌಸ್ ಸಮೀಪದ ವಿಜೇತ ನಗರದಲ್ಲಿರುವ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಎಸಿಪಿ ಧನ್ಯಾ ನಾಯಕ್ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ಕಿಂಗ್ ಪಿನ್ ಮಹಿಳೆಯನ್ನು ಬಂಧಿಸಿದ್ದು , ಮತ್ತೋರ್ವ ಪಿಂಪ್ ತಲೆ ಮರೆಸಿಕೊಂಡಿದ್ದಾನೆ.

ಬಂಟ್ವಾಳ ತಾಲೂಕಿನ ಬೊಳಂತೂರು ಗ್ರಾಮದ, ವಿಟ್ಲಕೋಡಿ ನಿವಾಸಿ, ಪಿಂಪ್ ರುಕಿಯಾ (50)ಬಂಧಿತ ಆರೋಪಿ. ಮತ್ತೋರ್ವ ಪ್ರಮುಖ ಆರೋಪಿ ಪಿಂಪ್ ಲತೀಫ್ ಎಂಬಾತ ಪರಾರಿಯಾಗಿದ್ದಾನೆ.

ರುಕಿಯಾ ವಿಜೇತ ನಗರದ ಬಾಡಿಗೆ ಮನೆಯೊಂದರಲ್ಲಿ ಯುವತಿಯರನ್ನಿಟ್ಟು ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ಧನ್ಯಾ ಎನ್. ನಾಯ್ಕ್ ಅವರು ಉಳ್ಳಾಲ ಪೊಲೀಸ್ ಠಾಣಾ ನಿರೀಕ್ಷಕರಾದ ಸಂದೀಪ್ ಜಿ.ಎಸ್. ಉಪ‌ನಿರೀಕ್ಷಕರಾದ ಮಂಜುಳಾ.ಎಲ್ ನೇತೃತ್ವದಲ್ಲಿ ಮಂಗಳವಾರ ರಾತ್ರಿ ಅಡ್ಡೆಗೆ ದಾಳಿ ನಡೆಸಿದ್ದಾರೆ. ಈ ವೇಳೆ ಮನೆಯಲ್ಲಿದ್ದ ಮೂವರು ಗಿರಾಕಿಗಳನ್ನು ವಶಕ್ಕೆ ಪಡೆದ ಪೊಲೀಸರು ನಾಲ್ವರು ನೊಂದ ಯುವತಿಯರನ್ನು ರಕ್ಷಿಸಿದ್ದಾರೆ.

ಬಂಧಿತ ಆರೋಪಿಯಿಂದ 3 ದ್ವಿಚಕ್ರ ವಾಹನಗಳು, 9 ಮೊಬೈಲ್ ಫೋನ್ ಗಳು, 5,000 ನಗದು ಸೇರಿದಂತೆ ಒಟ್ಟು 1,76,580 ರೂಪಾಯಿ ಮೌಲ್ಯದ ಸೊತ್ತನ್ನು ವಶ ಪಡಿಸಲಾಗಿದೆ. ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಮಂಜುನಾಥ್ ಎನ್, ದಾಕ್ಷಾಯಿಣಿ, ಲಕ್ಷ್ಮಿ , ಎಸಿಪಿ ರೌಡಿ ನಿಗ್ರಹದಳ ಸಿಬ್ಬಂದಿ ರೆಜಿ ಪಾಲ್ಗೊಂಡಿದ್ದರು.

- Advertisement -

Related news

error: Content is protected !!