Monday, June 30, 2025
spot_imgspot_img
spot_imgspot_img

ಉಳ್ಳಾಲ : ಮುಕ್ಕಚ್ಚೇರಿ ಸಮುದ್ರ ಕಿನಾರೆಯಲ್ಲಿ ಅಪರಿಚಿತ ವೃದ್ಧ ಮಹಿಳೆಯ ಮೃತದೇಹ ಪತ್ತೆ

- Advertisement -
- Advertisement -

ಉಳ್ಳಾಲ: ಮುಕ್ಕಚ್ಚೇರಿ ಸಮುದ್ರ ಕಿನಾರೆಯಲ್ಲಿ ಅಪರಿಚಿತ ವೃದ್ಧ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಸುಮಾರು 60-70 ರ ಹರೆಯದ ಮಹಿಳೆ ಮೃತದೇಹ ಇದಾಗಿದ್ದು ಸೀರೆ ಉಟ್ಟಿರುವ ಮಹಿಳೆ ಸಮುದ್ರಕ್ಕೆ ಬಿದ್ದಿರುವ ಶಂಕೆಯಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರ ಕರಣ ದಾಖಲಾಗಿದೆ. ಸಮ್ಮರ್ ಸ್ಯಾಂಡ್ ಹಿಂಭಾಗದಲ್ಲಿ ಶವ ತೇಲುತ್ತಿರುವುದನ್ನು ಕಂಡು ಸ್ಥಳೀಯರು ಉಳ್ಳಾಲ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು.

ಅದರಂತೆ ಪೊಲೀಸರು ಗೃಹರಕ್ಷಕ ದಳದ ಸಿಬ್ಬಂದಿ ಮೊಗವೀರಪಟ್ನ ನಿವಾಸಿ ಪ್ರಸಾದ್ ಸುವರ್ಣ ಅವರಿಗೆ ಮಾಹಿತಿ ನೀಡಿದ್ದು , ಅವರು ಖುದ್ದಾಗಿ ಸಮುದ್ರದಲ್ಲಿ ಈಜಿ ಮೃತದೇಹವನ್ನು ದಡಕ್ಕೆ ಸೇರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ವಾರೀಸುದಾರರಿದ್ದಲ್ಲಿ ಉಳ್ಳಾಲ ಪೊಲೀಸ್‌ ಠಾಣೆ ಸಂಪರ್ಕಿಸುವಂತೆ ಕೋರಲಾಗಿದೆ.

- Advertisement -

Related news

error: Content is protected !!