Thursday, May 2, 2024
spot_imgspot_img
spot_imgspot_img

ಉಳ್ಳಾಲ: ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗುತ್ತಿದ್ದ ಕಾಮುಕನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು!!

- Advertisement -G L Acharya panikkar
- Advertisement -
vtv vitla
vtv vitla

ಉಳ್ಳಾಲ: ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ ಯುವಕನೋರ್ವನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಡಿ.25ರಂದು ನಡೆದಿದೆ.

vtv vitla
vtv vitla

ಬಂಧಿತ ಆರೋಪಿ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಹೊಸಬೆಟ್ಟು ನಿವಾಸಿ ಮುಸ್ತಫ ಎನ್ನಲಾಗಿದೆ.

ಕಳೆದ ಶನಿವಾರ ಸ್ಕೂಟರ್ ನಲ್ಲಿ ಬಂದಿದ್ದ ಯುವಕನೋರ್ವ ತಲಪಾಡಿಯ ದೇವಿಪುರಕ್ಕೆ ತೆರಳುವ ಒಳ ರಸ್ತೆ ಬಳಿ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದ ಎನ್ನಲಾಗಿದೆ. ಬಳಿಕ ಸಿಸಿಟಿವಿ ದೃಶ್ಯಾವಳಿಯನ್ನು ಪರಿಶೀಲಿಸಿದ ಸ್ಥಳೀಯರು ಆರೋಪಿಯ ಚಹರೆಯನ್ನು ಪತ್ತೆ ಹಚ್ಚಿದ್ದರು.

ಇಂದು ಕೂಡ ಮುಸ್ತಫ ಸ್ಕೂಟರಿನಲ್ಲಿ ಬಂದಿದ್ದು, ತಲಪಾಡಿ ಶ್ರೀರಾಮ ಭಜನಾ ಮಂದಿರದ ಬಳಿ ನಡೆದುಕೊಂಡು ಹೋಗುತ್ತಿದ್ದ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಲು ಯತ್ನಿಸಿದನೆನ್ನಲಾಗಿದೆ. ಈ ವೇಳೆ ಸ್ಥಳೀಯರು ಆತನನ್ನು ಹಿಡಿದು ಥಳಿಸಿ ಉಳ್ಳಾಲ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಕಳೆದೊಂದು ವಾರದಲ್ಲಿ ನಡೆದ ಎರಡು ಕಿರುಕುಳ ಕೃತ್ಯವನ್ನು ಆರೋಪಿ ಮುಸ್ತಫ ಎಸಗಿದ್ದ ನ್ನಲಾಗಿದ್ದು, ಈ ಬಗ್ಗೆ ಸಂತ್ರಸ್ತೆ ಯುವತಿಯರು ನೀಡಿದ ದೂರಿನಂತೆ ಉಳ್ಳಾಲ ಪೊಲೀಸರು ಪೋಕ್ಸೋ ಸಹಿತ ಎರಡು ಪ್ರಕರಣಗಳು ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.

vtv vitla
vtv vitla
suvarna gold
- Advertisement -

Related news

error: Content is protected !!