Tuesday, March 19, 2024
spot_imgspot_img
spot_imgspot_img

ಉಳ್ಳಾಲ: ವಿವಾಹಿತ ಮಹಿಳೆಗೆ ಸಹೋದ್ಯೋಗಿಯಿಂದ ಲೈಂಗಿಕ ಕಿರುಕುಳ; ಹಿಂದೂ ಕಾರ್ಯಕರ್ತರಿಂದ ಧರ್ಮದೇಟು

- Advertisement -G L Acharya panikkar
- Advertisement -

ಉಳ್ಳಾಲ: ಹಣ ಹಿಂತಿರುಗಿಸುವ ನೆಪದಲ್ಲಿ ಅನ್ಯಕೋಮಿನ ಯುವಕನೋರ್ವ ಸಹೋದ್ಯೋಗಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಿನ್ನೆ ರಾತ್ರಿ ಉಳ್ಳಾಲದ ಅಬ್ಬಂಜರ ಎಂಬ ನಿರ್ಜನ ಪ್ರದೇಶದಲ್ಲಿ ನಡೆದಿದ್ದು ಸ್ಥಳಕ್ಕೆ ಎಂಟ್ರಿ ನೀಡಿದ ಬಜರಂಗದಳದ ಕಾರ್ಯಕರ್ತರು ಕಾಮುಕನಿಗೆ ಧರ್ಮದೇಟು ನೀಡಿ ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ.

ಅಡ್ಯಾರ್ ಪದವು ನಿವಾಸಿ ಮುನೀರ್ (27)ಬಂಧಿತ ಆರೋಪಿ, ಮುನೀರ್ ಮತ್ತು ಉಳ್ಳಾಲ ಬೈಲ್ ನಿವಾಸಿ ವಿವಾಹಿತ ಮಹಿಳೆ ತೊಕ್ಕೊಟ್ಟಿನ ಸಾಗರ್ ಕಲೆಕ್ಷನ್‌ ಬಟ್ಟೆ ಮಳಿಗೆಯಲ್ಲಿ ಉದ್ಯೋಗಿಗಳು. ಒಂದೇ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದರಿಂದ ಇವರಿಬ್ಬರು ಪರಸ್ಪರ ಪರಿಚಯಸ್ಥರು.

ಬುಧವಾರ ರಾತ್ರಿ ಮುನೀರ್ ಅಬ್ಬಂಜರದ ನಿರ್ಜನ ಪ್ರದೇಶದಲ್ಲಿ ಮಹಿಳೆಯನ್ನು ಭೇಟಿಯಾಗಿ ಹಣ ಹಿಂದಿರುಗಿಸುವ ಸೋಗಿನಲ್ಲಿ ಮುನೀ‌ರ್‌ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದು, ಈ ಸಂದರ್ಭ ಸ್ಥಳೀಯ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿ ಆರೋಪಿ ಮುನೀರ್ ಗೆ ಧರ್ಮದೇಟು ನೀಡಿ ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ.

ಸಂತ್ರಸ್ತ ಮಹಿಳೆಗೆ ವಿವಾಹ ಆಗಿದ್ದು, ಒಂದು ಮಗು ಇದೆ. ಮಹಿಳೆ ನೀಡಿದ ದೂರಿನ ಮೇರೆಗೆ ಉಳ್ಳಾಲ ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

- Advertisement -

Related news

error: Content is protected !!