Saturday, May 4, 2024
spot_imgspot_img
spot_imgspot_img

ಎಂಡಿಎಂಎ ಮಾದಕ ದ್ರವ್ಯ ಮಾರಾಟಕ್ಕೆ ಯತ್ನ; ಆರೋಪಿ ಬಂಧನ

- Advertisement -G L Acharya panikkar
- Advertisement -

ಉಳ್ಳಾಲ: ಮಾದಕದ್ರವ್ಯ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿ ಡ್ರಗ್ಸ್ ಸೇರಿದಂತೆ ಬೆಲೆ ಬಾಳುವ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಮಂಜೇಶ್ವರ ಗೇರುಕಟ್ಟೆ ನಿವಾಸಿ ಅಬ್ದುಲ್ಲಾ ಬಿ. ಯಾನೆ ಸದ್ದಾಂ ಬಂಧಿತ ಆರೋಪಿಯಾಗಿದ್ದಾನೆ. ಆರೋಪಿ ಅಬ್ದುಲ್ಲಾ ಬಿ ನಾಟೆಕಲ್ ವಿಜಯನಗರ ಎಂಬಲ್ಲಿ ಯಮಹ ಎಫ್ ಝೀ ಬೈಕ್‌ನಲ್ಲಿ ಬಂದು ಎಂಡಿಎಂಎ ಮಾದಕ ದ್ರವ್ಯವನ್ನು ಮಾರಾಟ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ಕೊಣಾಜೆ ಪೊಲೀಸರು ದಾಳಿ ನಡೆಸಿದ್ದಾರೆ. ಯಮಹ ಎಫ್ ಝೀ ಬೈಕ್ ಮೇಲೆ ಕುಳಿತಿದ್ದವನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಆರೋಪಿಯು ಅಕ್ರಮವಾಗಿ ನಿಷೇಧಿತ 8 ಗ್ರಾಂ ಎಂಡಿಎಂಎ ತಂದು ಮಾರಾಟ ಮಾಡುತ್ತಿರುವುದಾಗಿ ಒಪ್ಪಿಕೊಂಡಿದ್ದಾನೆ. ಇನ್ನು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ನಿಷೇದಿತ ಮಾದಕ ವಸ್ತುವಿನ ಮೌಲ್ಯ 40,000 ರೂ. ಮತ್ತು ಮೊಬೈಲ್‌ಗಳು ಹಾಗೂ ಬೈಕ್‌ನ ಮೌಲ್ಯ 1,56,000 ರೂ. ಸೇರಿ 2,06,000 ರೂ. ಎಂದು ಅಂದಾಜಿಸಲಾಗಿದೆ.

ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್, ಡಿಸಿಪಿ ಕಾನೂನು ಮತ್ತು ಸುವ್ಯವಸ್ಥೆ ಆನ್ಶುಕುಮಾರ್, ಡಿಸಿಪಿ ಅಪರಾಧ ಮತ್ತು ಸಂಚಾರ ದಿನೇಶ್ ಕುಮಾರ್ ಹಾಗೂ ಎಸಿಪಿ ದಿನಕರ ಶೆಟ್ಟಿ ಅವರ ನಿರ್ದೇಶನದಂತೆ ಇನ್ಸ್‌ಪೆಕ್ಟರ್ ಪ್ರಕಾಶ್ ನೇತೃತ್ವದಲ್ಲಿ ಪಿಎಸೈ ಶರಣಪ್ಪ ಭಂಡಾರಿ ಹಾಗೂ ಸಿಬ್ಬಂದಿಗಳಾದ ಶಿವಕುಮಾರ್, ಪುರುಷೋತ್ತಮ, ಸುರೇಶ್, ಪ್ರಶಾಂತ, ದೀಪಕ್, ಶೈಲೆಂದ್ರ, ಮಂಜಪ್ಪ ಅವರ ತಂಡ ಕಾರ್ಯಾಚರಣೆಯಲ್ಲಿ ಭಾಗವಹಿಸಿತ್ತು.

- Advertisement -

Related news

error: Content is protected !!