Saturday, April 20, 2024
spot_imgspot_img
spot_imgspot_img

ಎಂಬಿಬಿಎಸ್ ಪದವೀಧರರಿಗೆ ಸರಕಾರಿ ಆಸ್ಪತ್ರೆಯಲ್ಲಿ ಸೇವೆ ಕಡ್ಡಾಯ; ಸಚಿವ ಡಾ. ಸುಧಾಕರ್

- Advertisement -G L Acharya panikkar
- Advertisement -

ಬೆಂಗಳೂರು: ಹೊರ ಗುತ್ತಿಗೆ ಆಧಾರದಲ್ಲಿ ವೈದ್ಯರನ್ನು ನೇಮಕ ಮಾಡುವ ಮೂಲಕ ರಾಜ್ಯದಲ್ಲಿ ವೈದ್ಯರ ಸಮಸ್ಯೆ ನೀಗಿಸಲು ಕ್ರಮ ವಹಿಸಲಾಗಿದೆ ಎಂದು ಆರೋಗ್ಯ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಕಡ್ಡಾಯ ಸೇವೆ ಸಲ್ಲಿಕೆ ಕ್ರಮ ಅನುಷ್ಠಾನಗೊಂಡಿದೆ. ಈ ಹಿನ್ನೆಲೆಯಲ್ಲಿ ಹೊರ ಗುತ್ತಿಗೆ ಆಧಾರದಲ್ಲಿ ವೈದ್ಯರನ್ನು ನೇಮಿಸಲಾಗುತ್ತಿದೆ. ವೈದ್ಯಕೀಯ ಶಿಕ್ಷಣ ಇಲಾಖೆಗಳ ವಿವಿಧ ಹುದ್ದೆಗಳಿಗೆ 2,053 ವೈದ್ಯರನ್ನು ನೇಮಿಸಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಇತ್ತೀಚೆಗೆ 1,750 ವೈದ್ಯರ ಐತಿಹಾಸಿಕ ನೇರ ನೇಮಕಾತಿ ಪ್ರಕ್ರಿಯೆ ನಡೆಸಲಾಗಿದೆ. ಆ ಮೂಲಕ ಸರಕಾರ ಕೊರೋನಾ ಸಂದರ್ಭದಲ್ಲಿ ಒಟ್ಟು 4,000 ವೈದ್ಯರನ್ನು ನೇಮಿಸಿದಂತಾಗಿದೆ ಎಂದರು.

ಇನ್ನು ಎಂಬಿಬಿಎಸ್ ಪದವೀಧರರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಒಂದು ವರ್ಷ ಸೇವೆ ನೀಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ 1,001 ವೈದ್ಯರನ್ನು 18 ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಗುತ್ತಿಗೆ ನೇಮಕ ಮಾಡಲಾಗಿದೆ. ತಾಲೂಕು ಮತ್ತು ಜಿಲ್ಲಾಸ್ಪತ್ರೆಗಳ ಐಸಿಯುನಲ್ಲಿ ಕೆಲಸ ಮಾಡಲು 666 ವೈದ್ಯರನ್ನು ನೇಮಕಗೊಂಡಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

- Advertisement -

Related news

error: Content is protected !!