Friday, May 10, 2024
spot_imgspot_img
spot_imgspot_img

ಎನ್ಐಟಿಕೆ ಸುರತ್ಕಲ್ ನಲ್ಲಿ ಮತ ಏಣಿಕೆ; ಮೊಬೈಲ್, ಎಲೆಕ್ಟ್ರಾನಿಕ್ಸ್ ವಾಚ್, ಇ-ಗ್ಯಾಜೆಟ್‌ಗಳು ನಿಷೇಧ

- Advertisement -G L Acharya panikkar
- Advertisement -
vtv vitla

ಮಂಗಳೂರು: ಸಾರ್ವತ್ರಿಕ ಕರ್ನಾಟಕ ವಿಧಾನಸಭಾ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ಮೇ10ರಂದು ಚುನಾವಣೆ ನಡೆಯಲಿದ್ದು ಚುನಾವಣೆಯ ಮತ ಎಣಿಕೆ ಮೇ.13ರಂದು ಸುರತ್ಕಲ್‌ನಲ್ಲಿರುವ ಎನ್.ಐ.ಟಿ.ಕೆಯಲ್ಲಿ ನಡೆಯಲಿದೆ.

ಮತ ಎಣಿಕೆಯ ದಿನದಂದು ಜನಪ್ರತಿನಿಧಿಗಳು, ಚುನಾವಣಾ ಎಂಜೆಟರುಗಳು, ಮತ ಎಣಿಕೆ ಎಂಜೆಟ್‌ಗಳು, ಮತ ಎಣಿಕೆ ಕೇಂದ್ರಕ್ಕೆ ಎಣಿಕೆ ಕಾರ್ಯಕ್ಕೆ ನಿಯೋಜಿಸಲಾದ ಮೇಲ್ವಿಚಾರಕರು, ಸಹಾಯಕರು, ಗ್ರೂಪ್ ಡಿ ಸಿಬ್ಬಂದಿಗಳು ಮತ್ತು ಇನ್ನಿತರ ಎಲ್ಲಾ ಸಿಬ್ಬಂದಿಗಳು ಮತ ಎಣಿಕೆ ಕೇಂದ್ರದ ಆವರಣದೊಳಗೆ ಪ್ರವೇಶಿಸುವಾಗ ಮೊಬೈಲ್, ಎಲೆಕ್ಟ್ರಾನಿಕ್ಸ್ ವಾಚ್, ಮತ್ತು ಇನ್ನಿತರೇ ಡಿಜಿಟಲ್ ತಂತ್ರಜ್ಞಾನದ ಉಪಕರಣಗಳೊಂದಿಗೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ.

ಈ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು ಹಾಗೂ ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಪ್ರಜಾಪ್ರತಿನಿಧಿ ಕಾಯಿದೆ 1951ರ ಕಲಂ 126 ಹಾಗೂ ಭಾರತೀಯ ದಂಡ ಸಂಹಿತೆಯ ಕಾಯಿದನ್ವಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಹಾಗೂ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!