Sunday, May 19, 2024
spot_imgspot_img
spot_imgspot_img

ಎರಡನೇ ಅವಧಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಯೋಗಿ ಆದಿತ್ಯನಾಥ್

- Advertisement -G L Acharya panikkar
- Advertisement -

ಲಖನೌ: ಸತತ ಎರಡನೇ ಅವಧಿಗೆ ಉತ್ತರ ಪ್ರದೇಶ ರಾಜ್ಯದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಅವರು ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲೆ ಆನಂದಿಬೆನ್ ಪಟೇಲ್ ಪ್ರಮಾಣವಚನ ಬೋಧಿಸಿದರು.

ಅಟಲ್ ಬಿಹಾರ ವಾಜಪೇಯಿ ಎಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಯೋಗಿ ಆದಿತ್ಯನಾಥ್ ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಸಮಾರಂಭಕ್ಕೆ ಸಾಕ್ಷಿಯಾದರು. ಸುಮಾರು 85 ಸಾವಿರ ಮಂದಿ ಭಾಗವಹಿಸಿದ್ದರು. ನೂತನ ಉಪ ಮುಖ್ಯಮಂತ್ರಿಗಳಾಗಿ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಜೇಶ್ ಪಾಠಕ್ ಕೂಡಾ ಇದೇ ವೇಳೆ ಪ್ರಮಾಣ ವಚನ ಸ್ವೀಕರಿಸಿದರು.

ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಗೋರಖ್ ಪುರ ದೇವಸ್ಥಾನದಲ್ಲಿ ಸಂತರು ಮತ್ತು ಅರ್ಚಕರು ವಿಶೇಷ ಪೂಜೆ ನಡೆಸಿ ನೂತನ ಮುಖ್ಯಮಂತ್ರಿಗೆ ದೇವರ ಅನುಗ್ರಹ ಪ್ರಾಪ್ತಿಯಾಗುವಂತೆ ಬೇಡಿಕೊಂಡರು

- Advertisement -

Related news

error: Content is protected !!