Monday, May 13, 2024
spot_imgspot_img
spot_imgspot_img

‘ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಂವಿಧಾನ ದಿನ ಆಚರಿಸಿ’-ಯುಜಿಸಿ ನಿರ್ದೇಶನ

- Advertisement -G L Acharya panikkar
- Advertisement -

ನವದೆಹಲಿ: ದೇಶಾದ್ಯಂತ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ನವೆಂಬರ್ 26ರಂದು ಸಂವಿಧಾನ ದಿನವನ್ನು ಆಚರಿಸುವಂತೆ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (ಯುಜಿಸಿ) ವಿವಿ ಉಪ ಕುಲಪತಿಗಳಿಗೆ ನಿರ್ದೇಶಿಸಿದೆ.

ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳು ಹಾಗೂ ದೇಶದ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರಿಗೆ ಈ ಸಂಬಂಧ ಸುತ್ತೋಲೆ ಕಳುಹಿಸಿರುವ ವಿವಿ ಅನುದಾನ ಸಮಿತಿ ಕಾರ್ಯದರ್ಶಿ ರಜನೀಶ್ ಜೈನ್, ಕಡ್ಡಾಯವಾಗಿ ಸಂವಿಧಾನ ದಿನವನ್ನು ಆಚರಿಸುವಂತೆ ಸೂಚನೆ ನೀಡಿದ್ದಾರೆ.

‘ಸ್ವಾತಂತ್ರ್ಯದ ನಂತರ ನವೆಂಬರ್ 26ರಂದು ದೇಶದಲ್ಲಿ ಸಂವಿಧಾನ ದಿನವನ್ನು ಆಚರಿಸಲಾಗುತ್ತಿದೆ. ಪ್ರಜಾಪ್ರಭುತ್ವ ರಾಷ್ಟ್ರ ಭಾರತ ಸ್ವಾತಂತ್ರ್ಯ ಗಳಿಸಿ 75 ವರ್ಷ ಪೂರೈಸುತ್ತಿರುವ ಈ ಸಂದರ್ಭದಲ್ಲಿ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಸಂವಿಧಾನ ದಿನಾಚರಣೆ ನಡೆಯಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

- Advertisement -

Related news

error: Content is protected !!