

ಕೋವಿಡ್ ೪ನೇ ಅಲೆಯ ಮುನ್ನೆಚ್ಚರಿಕೆ ಕುರಿತಂತೆ ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದ್ದಾರೆ.
ಇದರ ಬೆನ್ನಲ್ಲೇ ಆಗ್ನೇಯ ಏಷ್ಯಾ ಮತ್ತು ಯುರೋಪ್‌ನ ಅನೇಕ ಭಾಗಗಳಲ್ಲಿ, ಸಿಂಗಾಪುರ, ವಿಯೆಟ್ನಾಂ ಸೇರಿದಂತೆ ಹಲವು ದೇಶಗಳಲ್ಲಿ ಕೋವಿಡ್ ಪ್ರಕರಣಗಳಲ್ಲಿ ಏರಿಕೆ ಉಂಟಾಗಿದೆ. ಹೀಗಾಗಿ ಭಾರತಕ್ಕೂ ಕೋವಿಡ್ ೪ನೇ ಅಲೆ ಕಾಲಿಡುವ ಆತಂಕ ಎದುರಾಗಿದೆ. ಹೀಗಾಗಿ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಎಚ್ಚರಿಕೆ ರವಾನಿಸಿದೆ.

೫ ಹಂತಗಳಲ್ಲಿ ಎಚ್ಚರಿಕೆ ವಹಿಸುವಂತೆ ಸೂಚನೆ
ಕೋವಿಡ್ ಪರೀಕ್ಷೆ, ಪತ್ತೆ, ಕೋವಿಡ್ ಚಿಕಿತ್ಸೆ, ಕೋವಿಡ್ ಶಿಷ್ಟಾಚಾರಗಳ ಪಾಲನೆ ಮತ್ತು ಕೋವಿಡ್ ವಿರುದ್ಧ ಲಸಿಕೆ ಹೀಗೆ ಈ ಐದು ಹಂತದ ಕಾರ್ಯತಂತ್ರದ ಮೇಲಿನ ಗಮನ ಮುಂದುವರಿಸುವoತೆ ಕೇಂದ್ರ ಸರ್ಕಾರ ನಿರ್ದೇಶನ ಕೊಟ್ಟಿದೆ.
ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಅವರು ಮಾರ್ಚ್ ೧೬ರಂದು ಉನ್ನತ ಮಟ್ಟದ ಸಭೆ ನಡೆಸಿದ್ದರು. ಭಾರತದಲ್ಲಿಯೂ ಮತ್ತೊಮ್ಮೆ ಕೋವಿಡ್ ವ್ಯಾಪಕವಾಗುವ ಸಾಧ್ಯತೆ ಇದೆ. ಹೀಗಾಗಿ ಹೆಚ್ಚು ಹೆಚ್ಚು ಜಿನೋಮ್ ಸೀಕ್ವೆನ್ಸಿಂಗ್, ಕಠಿಣ ನಿಗಾವಣೆ ಹಾಗೂ ಒಟ್ಟಾರೆ ಕೋವಿಡ್ ಸನ್ನಿವೇಶದ ಮೇಲಿನ ಗಮನವನ್ನು ಬಲಗೊಳಿಸುವಂತೆ ರಾಜ್ಯಗಳಿಗೆ ಸಲಹೆ ನೀಡಿದ್ದಾರೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಫೇಸ್ ಮಾಸ್ಕ್ ಧರಿಸುವುದು, ಎಲ್ಲ ಸಾರ್ವಜನಿಕ ಸ್ಥಳಗಳಲ್ಲಿ ದೈಹಿಕ ಅಂತರ ಕಾಪಾಡಿಕೊಳ್ಳುವುದು, ಕೈಗಳನ್ನು ಸ್ವಚ್ಚವಾಗಿ ಇರಿಸಿಕೊಳ್ಳುವುದು ಮುಂತಾದ ಎಲ್ಲ ಕೋವಿಡ್ ಶಿಷ್ಟಾಚಾರಗಳನ್ನು ಪಾಲಿಸುವಂತೆ ನೋಡಿಕೊಳ್ಳುವ ಹಾಗೂ ಅದರ ಬಗ್ಗೆ ಜಾಗೃತಿ ಮೂಡಿಸುವ ಕೆಲಸಗಳನ್ನು ರಾಜ್ಯಗಳು ಮುಂದುವರಿಸಬೇಕು ಎಂದು ಹೇಳಿದ್ದಾರೆ.

ಅತ್ತ ಚೀನಾದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಜಾಸ್ತಿಯಾಗುತ್ತಿದೆ. ಕಳೆದ ಎರಡು ವರ್ಷಗಳಲ್ಲಿಯೇ ಚೀನಾದಲ್ಲಿವ್ಯಾಪಕ ಪ್ರಮಾಣದಲ್ಲಿ ಕೊರೋನಾ ಪ್ರಕರಣಗಳಲ್ಲಿ ಏರಿಕೆ ಕಾಣುತ್ತಿದೆ. ದೇಶದಲ್ಲಿ ಸುಮಾರು ೩ ಕೋಟಿ ಜನರು ಲಾಕ್‌ಡೌನ್ ನಿರ್ಬಂಧಕ್ಕೆ ಒಳಪಟ್ಟಿದ್ದಾರೆ.
ಪಿಪಿಇ ಕಿಟ್ ಧರಿಸಿರುವ ಆರೋಗ್ಯ ಅಧಿಕಾರಿಗಳು ನಗರದ ಬೀದಿ ಬೀದಿಗಳಲ್ಲಿ ತುಂಬಿಕೊAಡಿದ್ದಾರೆ. ಚೀನಾದಾದ್ಯಂತ ಸುಮಾರು ೧೩ಕ್ಕೂ ಹೆಚ್ಚು ನಗರಗಳಲ್ಲಿ ಸಂಪೂರ್ಣ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ. ಇನ್ನು ಕೆಲವು ನಗರಗಳಲ್ಲಿ ಭಾಗಶಃ ಲಾಕ್‌ಡೌನ್ ಜಾರಿಯಲ್ಲಿದೆ.










