- Advertisement -
- Advertisement -

ನವದೆಹಲಿ: ಕೇಂದ್ರ ಸರ್ಕಾರವು ದೇಶೀಯ LPG ಸಿಲಿಂಡರ್‌ಗಳ ತೂಕವನ್ನು ಕಡಿಮೆ ಮಾಡಲು ತಯಾರಿ ನಡೆಸುತ್ತಿದೆ. 14.2 ಕೆಜಿ ತೂಕದ ಗ್ಯಾಸ್ ಸಿಲಿಂಡರ್‌ಗಳನ್ನು (ಎಲ್‌ಪಿಜಿ) ಸಾಗಿಸಲು ಮಹಿಳೆಯರು ಎದುರಿಸುತ್ತಿರುವ ತೊಂದರೆಗಳನ್ನು ಗಮನದಲ್ಲಿಟ್ಟುಕೊಂಡು, ಅದರ ತೂಕವನ್ನು ಕಡಿಮೆ ಮಾಡುವುದು ಸೇರಿದಂತೆ ವಿವಿಧ ಆಯ್ಕೆಗಳನ್ನು ಸರ್ಕಾರ ಪರಿಗಣಿಸುತ್ತಿದೆ.14.2 ಕೆ.ಜಿ ತೂಕವನ್ನು 5 ಕೆ.ಜಿ.ಗೆ ಇಳಿಸುವ ಬಗ್ಗೆ ಚಿಂತಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ರಾಜ್ಯಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಪೂರಕ ಪ್ರಶ್ನೆಗಳಿಗೆ ಉತ್ತರವಾಗಿ ಈ ಮಾಹಿತಿ ನೀಡಿದರು. ಇದಕ್ಕೂ ಮುನ್ನ ಸದಸ್ಯರೊಬ್ಬರು ಸಿಲಿಂಡರ್ ಭಾರದಿಂದ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಪ್ರಸ್ತಾಪಿಸಿದರು.

ಸಿಲಿಂಡರ್ ತೂಕ 14.2 ಕೆಜಿ ಎಲ್‌ಪಿಜಿ ಪೂರ್ಣ ಭರ್ತಿ ಮಾಡಿದಾಗ 29 ಕೆಜಿ ಒಟ್ಟು ತೂಕವನ್ನು ಹೊಂದುವುದು.



- Advertisement -