Tuesday, June 30, 2026
spot_imgspot_img
spot_imgspot_img

ಎಸ್​ಎಸ್​ಎಲ್​ಸಿ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಕೆಎಸ್​ಆರ್​ಟಿಸಿ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

- Advertisement -
- Advertisement -

ಬೆಂಗಳೂರು: ಕೊರೊನಾ ಕಾರಣದಿಂದ ಕರ್ನಾಟಕದಲ್ಲಿ ವಿಳಂಬವಾಗಿರುವ ಎಸ್​ಎಸ್​ಎಲ್​ಸಿ ಪರೀಕ್ಷೆ ಜುಲೈ 19 ಹಾಗೂ 22ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಕೆಎಸ್​ಆರ್​ಟಿಸಿ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಪರೀಕ್ಷೆಯ ದಿನಗಳಂದು ಅಂದರೆ ಜುಲೈ 19 ಹಾಗೂ ಜುಲೈ 22ರಂದು ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಡುವುದಾಗಿ ತಿಳಿಸಿದೆ.

ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳು ತಮ್ಮ ವಾಸ ಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಉಚಿತ ಪ್ರಯಾಣ ಮಾಡಬಹುದಾಗಿದ್ದು, ಪರೀಕ್ಷಾ ಪ್ರಮಾಣ ಪತ್ರ ತೋರಿಸುವ ಮೂಲಕ ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ರಾಜ್ಯಾದ್ಯಂತ ಎಲ್ಲಾ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೂ ಇದು ಅನ್ವಯವಾಗಲಿದ್ದು, ಪರೀಕ್ಷಾ ಕೇಂದ್ರದ ತನಕ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ.

ಈ ವಿಚಾರದ ಕುರಿತು ಕೆಎಸ್​ಆರ್​ಟಿಸಿ ಎಂಡಿ ಶಿವಯೋಗಿ ಕಳಸದ್​ ಆದೇಶ ಹೊರಡಿಸಿದ್ದು, ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳು ಜುಲೈ 19 ಹಾಗೂ ಜುಲೈ 22ರಂದು ತಾವು ವಾಸಿಸುವ ಪ್ರದೇಶದಿಂದ ಪರೀಕ್ಷಾ ಕೇಂದ್ರದ ತನಕ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಉಚಿತ ಪ್ರಯಾಣ ಬೆಳೆಸಬಹುದಾಗಿದೆ. ಪರೀಕ್ಷಾ ಪ್ರಮಾಣ ಪತ್ರ ತೋರಿಸಿದರೆ ಸಾಕು ಯಾವುದೇ ರೀತಿಯ ಶುಲ್ಕ ತೆರಬೇಕಾಗಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಸಾಮಾನ್ಯ ಹಾಗೂ ವೇಗಧೂತ ಬಸ್​ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಪರೀಕ್ಷೆ ಮುಗಿಸಿ ವಾಪಾಸು ಮನೆಗೆ ಬರುವಾಗಲೂ ಇದು ಅನ್ವಯವಾಗಲಿದೆ. ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ ಹಾಗೂ ಪರೀಕ್ಷಾ ಕೇಂದ್ರದಿಂದ ಮರಳಿ ಮನೆಗೆ ಬರುವಾಗ ಪರೀಕ್ಷಾ ಪ್ರಮಾಣ ಪತ್ರ ತೋರಿಸಿ ಉಚಿತ ಪ್ರಯಾಣ ಸೌಲಭ್ಯವನ್ನು ಪಡೆಯಬಹುದಾಗಿದೆ.

- Advertisement -

Related news

error: Content is protected !!