Wednesday, April 24, 2024
spot_imgspot_img
spot_imgspot_img

ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ!

- Advertisement -G L Acharya panikkar
- Advertisement -

ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಶೇ.99.9ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು 4,70,160 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಓರ್ವ ವಿದ್ಯಾರ್ಥಿ ಮಾತ್ರ ಪರೀಕ್ಷೆಗೆ ಗೈರಾಗಿದ್ದು, ಉಳಿದ ಎಲ್ಲಾ ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ ಎಂದರು.

2,50,317 ವಿದ್ಯಾರ್ಥಿಗಳು A ಗ್ರೇಡ್, 2,87,694 ವಿದ್ಯಾರ್ಥಿಗಳು B ಗ್ರೇಡ್ ಹಾಗೂ 1,1,610 ವಿದ್ಯಾರ್ಥಿಗಳು C ಗ್ರೇಡ್ ಪಡೆದುಕೊಂಡಿದ್ದಾರೆ ಎಂದು ವಿವರಿಸಿದರು. sslc.Karnataka.gov.in ನಲ್ಲಿ ಫಲಿತಾಂಶ ಲಭ್ಯವಿದೆ.

ಔಟ್ ಆಫ್ ಔಟ್ ಅಂಕ ಪಡೆದ ಮಕ್ಕಳ ಸಂಖ್ಯೆ:
ಗಣಿತ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದ 6321 ಮಕ್ಕಳು, ವಿಜ್ಞಾನ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದ 3,649 ಮಕ್ಕಳು, ಸಮಾಜ ವಿಜ್ಞಾನ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದ 9,367 ಮಕ್ಕಳು, ಗಣಿತ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದ 6321 ಮಕ್ಕಳು, ವಿಜ್ಞಾನ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದ 3,649 ಮಕ್ಕಳು, ಸಮಾಜ ವಿಜ್ಞಾನ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದ 9,367 ಮಕ್ಕಳು ಉತ್ತಮ ಫಲಿತಾಂಶ ಪಡೆದಿದ್ದಾರೆ.

ಫಲಿತಾಂಶದ ಬಗ್ಗೆ ಅಸಮಾಧಾನವಿದ್ದಲ್ಲಿ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದು. ಒಂದುವೇಳೆ ಮರುಪರೀಕ್ಷೆ ಬರೆಯಲು ಇಚ್ಛಿಸಿದಲ್ಲಿ ಎರಡನೇ ಬಾರಿಗೆ ಅರ್ಜಿ ಸಲ್ಲಿಸಬಹುದು. ಅದಕ್ಕೆ ಶಿಕ್ಷಕರ ಸಹಾಯ ಪಡೆದು ಅಗತ್ಯವಿರುವ ದಾಖಲೆಗಳನ್ನು ಭರ್ತಿ ಮಾಡಿ ಮನವಿ ಮಾಡಬಹುದು. SSLC ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳೂ ಪಾಸ್ ಆಗಲಿದ್ದಾರೆ. ಫಲಿತಾಂಶವನ್ನು ಸಮತೋಲನದಿಂದ ತೆಗೆದುಕೊಳ್ಳಬೇಕು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

- Advertisement -

Related news

error: Content is protected !!