Friday, April 26, 2024
spot_imgspot_img
spot_imgspot_img

ಎಸ್.ಎಸ್.ಎಲ್.ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

- Advertisement -G L Acharya panikkar
- Advertisement -

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟಗೊಂಡಿದೆ.

2022-23ನೇ ಸಾಲಿನ ಎಸ್​ಎಸ್​ಎಲ್​ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅ.29 ಪ್ರಕಟಿಸಿತ್ತು. ಏಪ್ರಿಲ್ 1ರಿಂದ ಏ, 15ರವರೆಗೆ ಪರೀಕ್ಷೆ ನಡೆಸಲು ದಿನಾಂಕ ‌ನಿಗದಿ ಮಾಡಿದ್ದು, ಈ ಬಗ್ಗೆ ಏನಾದರೂ ಆಕ್ಷೇಪಣೆಗಳು ಇದ್ದರೆ ನವೆಂಬರ್ 28ರವರೊಳಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಿತ್ತು. ಇದೀಗ ಅಂತಿಮವಾಗಿ ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ಫೈನಲ್ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

ಈ ಕುರಿತಂತೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕರು ಮಾಹಿತಿ ಬಿಡುಗಡೆ ಮಾಡಿದ್ದಾರೆ. ಏಪ್ರಿಲ್ 2023ರ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯನ್ನು ದಿನಾಂಕ 31-03-2023 ರಿಂದ 15-04-2023ರವರೆಗೆ ನಡೆಸಲು ತೀರ್ಮಾನಿಸಲಾಗಿದೆ.

ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ವಿಷಯವಾರು ಅಂತಿಮ ವೇಳಾಪಟ್ಟಿ

ದಿನಾಂಕ 31-03-2023, ಶುಕ್ರವಾರ – ಪ್ರಥಮ ಭಾಷೆ – ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್(NCERT) ಹಾಗು ಸಂಸ್ಕೃತ
ದಿನಾಂಕ 04-04-2023, ಮಂಗಳವಾರ – ಕೋರ್ ಸಬ್ಜೆಕ್ಟ್ – ಗಣಿತ ಮತ್ತು ಸಮಾಜಶಾಸ್ತ್ರ
ದಿನಾಂಕ 06-04-2023, ಗುರುವಾರ – ದ್ವಿತೀಯ ಭಾಷೆ – ಇಂಗ್ಲೀಷ್, ಕನ್ನಡ
ದಿನಾಂಕ 08-04-2023, ಶನಿವಾರ – ಕೋರ್ ಸಬ್ಜೆಕ್ಟ್‌- ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಅಂಡ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-2, ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್-IV, ಇಂಜಿನಿಯರಿಂಗ್ ಗ್ರಾಫಿಕ್ಸ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್, ಪ್ರೋಗ್ರಾಮಿಂಗ್ ಇನ್ ಆನ್ಸಿ ಸಿ, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ
ದಿನಾಂಕ 10-04-2023, ಸೋಮವಾರ – ಕೋರ್ ಸಂಬ್ಜೆಕ್ಟ್ – ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ
ದಿನಾಂಕ 12-04-2023, ಬುಧವಾರ – ತೃತೀಯ ಭಾಷೆ – ಹಿಂದಿ ( NCERT), ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು ಹಾಗೂ ಎನ್ ಎಸ್ ಕ್ಯೂ ಎಫ್ ಪರೀಕ್ಷೆ ವಿಷಯಗಳು – ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ ನೆಸ್
ದಿನಾಂಕ 15-04-2023, ಶನಿವಾರ – ಕೋರ್ ಸಬ್ಜೆಕ್ಟ್ – ಸಮಾಜ ವಿಜ್ಞಾನ.

- Advertisement -

Related news

error: Content is protected !!