Friday, April 26, 2024
spot_imgspot_img
spot_imgspot_img

ಕಚೇರಿಯಲ್ಲೇ ಮಹಿಳಾ ಪಿಡಿಓ ಜೊತೆ ಗ್ರಾ.ಪಂ ಸದಸ್ಯನ ಅನುಚಿತ ವರ್ತನೆ..! ವೀಡಿಯೋ ವೈರಲ್

- Advertisement -G L Acharya panikkar
- Advertisement -

ತುಮಕೂರಿನ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ‌ ಜೆಸಿ ಪುರ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಮಾಜಿ ಅಧ್ಯಕ್ಷ, ಹಾಲಿ ಗ್ರಾಪಂ ಸದಸ್ಯನೊಬ್ಬ ಪಿಡಿಓ ಜೊತೆ ಅಸಭ್ಯವಾಗಿ ವರ್ತಿಸಿರುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪ್ರಸನ್ನ ಕುಮಾರ್ ಎಂಬಾತ ಪಿಡಿಓ ಜೊತೆಗೆ ಅಸಭ್ಯವಾಗಿ ವರ್ತಿಸಿದ ಭೂಪ. ಪದೇ ಪದೇ ಪಿಡಿಓ ಬಳಿ ಹೋಗಿ ಅಸಭ್ಯವಾಗಿ ವರ್ತಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಗ್ರಾಮ ಪಂ‌ಚಾಯಿತಿ ಸದಸ್ಯ ಪ್ರಸನ್ನ ಕುಮಾರ್ ಸದಸ್ಯತ್ವ ರದ್ದು ಮಾಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಗ್ರಾಮ ಪಂಚಾಯಿತಿ ಸದಸ್ಯ ಪ್ರಸನ್ನ, ಪಿಡಿಒ ಕೋಕಿಲಾ ಅವರಿಗೆ ಕಚೇರಿಯಲ್ಲೇ ಪಿಡಿಒ ಕೈ ಹಿಡಿದು ಚುಂಬಿಸಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮತ್ತೊಂದು ದೃಶ್ಯದಲ್ಲಿ ಪಿಡಿಒ ಅವರ ಕೈ ಹಿಡಿದುಕೊಂಡು ಬಲವಂತವಾಗಿ ಎಳೆದಾಡಿ ಮುತ್ತುಕೊಟ್ಟಿದ್ದಾನೆ. ಕೆಲ ದಿನಗಳ ಹಿಂದೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ವೀಡಿಯೋ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರಿಂದಲೂ ಆಕ್ಷೇಪ ವ್ಯಕ್ತವಾಗುತ್ತಿದೆ.

- Advertisement -

Related news

error: Content is protected !!