- Advertisement -
- Advertisement -


ಕಲಬುರಗಿ: 15 ವರ್ಷದ ಬಾಲಕಿಗೆ ಬಲವಂತವಾಗಿ ವಿಷ ಕುಡಿಸಿ ಹತ್ಯೆ ಮಾಡಿದ ಆರೋಪ ಕಲಬುರಗಿ ತಾಲೂಕಿನ ಪಾಣೆಗಾಂವ್ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿ ಪಾಯಲ್ (15) ಎನ್ನಲಾಗಿದೆ.

ಕಟ್ಟಿಗೆ ತರಲು ಮನೆ ಹಿಂದೆ ಹೋಗಿದ್ದ ವೇಳೆ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದು ಬಾಲಕಿಗೆ ವಿಷ ಕುಡಿಸಿರುವ ಆರೋಪ ಕೇಳಿಬಂದಿದೆ. ಬಾಲಕಿಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಸಾವನ್ನಪ್ಪಿದ್ದಾಳೆ.

ಪಾಣೆಗಾಂವ್ ಗ್ರಾಮದ ಸುನಿಲ್, ಸ್ನೇಹಿತನ ವಿರುದ್ಧ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಹಳೆ ವೈಷಮ್ಯದಿಂದ ಈ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಫರಹತಬಾದ್ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

- Advertisement -








