Monday, April 29, 2024
spot_imgspot_img
spot_imgspot_img

ಕಡಬ: ಕಾಡಾನೆ ಸೆರೆಹಿಡಿಯಲು ಫೀಲ್ಡ್‌ಗಿಳಿದ ತರಬೇತಿ ಹೊಂದಿದ್ದ ಗಜಪಡೆ..!

- Advertisement -G L Acharya panikkar
- Advertisement -
vtv vitla

ಕಡಬ: ನಿನ್ನೆ ಮರ್ದಾಳ ಸಮೀಪದ ನೈಲ ಎಂಬಲ್ಲಿ ಕಾಡಾನೆ ದಾಳಿಗೆ ಎರಡು ಜೀವಗಳು ಬಲಿಯಾಗಿದ್ದು, ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡ ಅರಣ್ಯ ಇಲಾಖೆಯು ಕಾಡಾನೆಯನ್ನು ಸೆರೆಹಿಡಿಯಲು ಸಾಕಾನೆಯನ್ನು ತರಿಸಿದೆ.

ನಿನ್ನೆ ರಾತ್ರಿಯೇ ಲಾರಿಗಳ ಮೂಲಕ ಮೈಸೂರು ಹಾಗೂ ದುಬಾರೆಯಿಂದ ಐದು ಆನೆಗಳು ಆಗಮಿಸಿದ್ದು, ಮಂಗಳವಾರ ಬೆಳಗ್ಗಿನಿಂದ ಕಾಡಾನೆಗಳನ್ನು ಸೆರೆ ಹಿಡಿಯುವ ಕಾರ್ಯಾಚರಣೆ ನಡೆಯಲಿದೆ.

ಅರಣ್ಯ ಇಲಾಖೆಯು ನರ ಹಂತಕ ಕಾಡಾನೆಯ ಚಲನವಲನ ಪತ್ತೆ ಹಚ್ಚಲು ಡ್ರೋನ್ ಬಳಸಿ ಮಾಹಿತಿ ಕಲೆ ಹಾಕಿತ್ತು. ಪೂರ್ವ ಸಿದ್ದತೆಯೊಂದಿಗೆ ಕಾಡಾನೆಯನ್ನು ಪತ್ತೆ ಹಚ್ಚಿ ಹಿಡಿದು ಬೇರೆಡೆ ಸ್ಥಳಾಂತರ ಮಾಡಲು ಅರಣ್ಯ ಇಲಾಖಾಧಿಕಾರಿಗಳು ಯೋಜನೆ ರೂಪಿಸಿದ್ದಾರೆ.

ಸೋಮವಾರ ಬೆಳಿಗ್ಗೆ ಕಾಡಾನೆಯು ಇಬ್ಬರನ್ನು ತಿವಿದು ಕೊಂದು ಹಾಕಿತ್ತು. ಆಕ್ರೋಶಗೊಂಡ ಸ್ಥಳೀಯರು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಾಡಾನೆಯನ್ನು ಸ್ಥಳಾಂತರಗೊಳಿಸದೆ ಮೃತದೇಹದ ಅಂತ್ಯಸಂಸ್ಕಾರ ನೆರವೇರಿಸುವುದಿಲ್ಲ ಎಂದು ಪಟ್ಟು ಹಿಡಿದಿದ್ದರು. ಇದಕ್ಕೆ ಮಣಿದ ಅರಣ್ಯ ಇಲಾಖೆಯ ಅಧಿಕಾರಿಗಳು ಕಾಡಾನೆಯನ್ನು ಸ್ಥಳಾಂತರಿಸುವ ಭರವಸೆ ನೀಡಿದ್ದ ಹಿನ್ನೆಲೆಯಲ್ಲಿ ಮೃತದೇಹವನ್ನು ವಾರಸುದಾರರಿಗೆ ನೀಡಲಾಗಿತ್ತು.

- Advertisement -

Related news

error: Content is protected !!