Friday, May 3, 2024
spot_imgspot_img
spot_imgspot_img

ಕಡಬ: ಕಾಲು ಜಾರಿ ಕೆರೆಗೆ ಬಿದ್ದು ಮಹಿಳೆ ಮೃತ್ಯು

- Advertisement -G L Acharya panikkar
- Advertisement -

ಕಡಬ: ಮಹಿಳೆಯೋರ್ವರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಕೊಣಾಲು ಗ್ರಾಮದಲ್ಲಿ ನಡೆದಿದೆ. ಕೊಣಾಲು ಗ್ರಾಮದ ದಿವಗಂತ ವೆಂಕಪ್ಪ ಗೌಡ ಅವರ ಪತ್ನಿ ಚೆನ್ನಮ್ಮ (70) ಎಂಬವರು ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ.

ಚೆನ್ನಮ್ಮ ಅವರು ತೋಟಕ್ಕೆ ತೆರಳುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದ್ದಿದ್ದಾರೆ ಎನ್ನಲಾಗಿದೆ. ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮಹಜರು ನಡೆಸಿ, ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ. ಮೃತರು ಇಬ್ಬರು ಗಂಡು ಮತ್ತು ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!