Friday, March 29, 2024
spot_imgspot_img
spot_imgspot_img

ಕಡಬ: ದೈವ ನರ್ತನ ಮಾಡುತ್ತಿರುವಾಗಲೇ ನರ್ತಕ ಕುಸಿದು ಬಿದ್ದು ಮೃತ್ಯು..!!

- Advertisement -G L Acharya panikkar
- Advertisement -
vtv vitla

ಕಡಬ: ದೈವ ನರ್ತಕರೊಬ್ಬರು ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಕಡಬ ಸಮೀಪದ ಎಡಮಂಗಲ ಗ್ರಾಮದಲ್ಲಿ ನಡೆದಿದೆ.

ಗ್ರಾಮದಲ್ಲಿ ದೈವ ನರ್ತಕರಾಗಿ ಹೆಸರುವಾಸಿಯಾಗಿದ್ದ ಕಾಂತು ಅಜಿಲ ಮೂಲಂಗೀರಿ ಸಾವನ್ನಪ್ಪಿದವರು. ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿದಂತೆ ದೈವಾರಾಧಕರಾಗಿ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು.

ಮಾ.30ರಂದು ಎಡಮಂಗಲ ಗ್ರಾಮದ ಇಡ್ಯಡ್ಕದಲ್ಲಿ ಗ್ರಾಮಕ್ಕೆ ಸಂಬಂಧಿಸಿದ ನೇಮೊತ್ಸವ ನಡೆಯುತ್ತಿದ್ದ ವೇಳೆ ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು ಬೀಳುತ್ತಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ತಕ್ಷಣ ಸ್ಥಳೀಯರು ಆಸ್ಪತ್ರೆಗೆ ಕೊಂಡೊಯ್ದರು ಆದಾಗಲೇ ಮೃತಪಟ್ಟಿದ್ದರು.

ಹೃದಯಾಘಾತಕ್ಕೆ ಒಳಗಾಗಿರಬಹುದೆಂದು ಅಂದಾಜಿಸಲಾಗಿದೆ. ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

- Advertisement -

Related news

error: Content is protected !!