Saturday, June 28, 2025
spot_imgspot_img
spot_imgspot_img

ಕಡಬ: ಧ್ವಜಾರೋಹಣದ ವೇಳೆ ನಿವೃತ್ತ ಸೈನಿಕರೋರ್ವರು ಕುಸಿದು ಬಿದ್ದು ದುರ್ಮರಣ

- Advertisement -
- Advertisement -

ಧ್ವಜಾರೋಹಣದ ವೇಳೆ ನಿವೃತ್ತ ಸೈನಿಕರೋರ್ವರು ಕುಸಿದು ಬಿದ್ದು ಅಸುನೀಗಿದ ಘಟನೆ ನಡೆದಿದೆ. ಕಡಬದ ಕುಟ್ರುಪಾಡಿ ಗ್ರಾ.ಪಂ. ವತಿಯಿಂದ ಹಳೆಸ್ಟೇ ಷನ್ ಅಮೃತ ಸರೋವರದ ಬಳಿ ನಡೆದ ಧ್ವಜಾರೋಹಣದ ವೇಳೆ ಈ ಘಟನೆ ನಡೆದಿದೆ. ಮೃತರಾದವರನ್ನು ನಿವೃತ್ತ ಸೈನಿಕ ಗಂಗಾಧರ ಗೌಡ ಎನ್ನಲಾಗಿದೆ.

ಹೊಸ ಮಠ ಸಿ.ಎ.ಬ್ಯಾಂಕಿನ ಮಾಜಿ ಅಧ್ಯಕ್ಷ ಎನ್. ಕರುಣಾಕರ ಗೋಗಟೆ ಧ್ವಜಾರೋಹಣ ಮಾಡಲು ಸಿದ್ದತೆ ಮಾಡುತ್ತಿದ್ದಾಗ ನಿವೃತ್ತ ಸೈನಿಕ ಗಂಗಾಧರ ಗೌಡ ಅವರು ಧ್ವಜ ವಂದನೆಯ ಮಾಹಿತಿ ನೀಡಿ ಧ್ವಜಾರೋಹಣಕ್ಕೆ ಸಿದ್ದವಾಗುತ್ತಿದ್ದ ವೇಳೆ ಕುಸಿದು ಬಿದ್ದಿದ್ದಾರೆ. ಅಸ್ವಸ್ಥಗೊಂಡರು. ಅವರನ್ನು ಅಲ್ಲಿದ್ದವರು ಕೂಡಲೇ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ದಾರಿ ಮಧ್ಯದಲ್ಲಿಯೇ ಮೃತಪಟ್ಟಿದ್ದಾರೆ.

- Advertisement -

Related news

error: Content is protected !!