Monday, May 13, 2024
spot_imgspot_img
spot_imgspot_img

ಕಡಬ: ವಿದ್ಯಾರ್ಥಿಗಳಿಗೆ ಕಪಾಲಮೋಕ್ಷ; ಆಸ್ಪತ್ರೆಗೆ ದಾಖಲು – ಶಿಕ್ಷಕನ ವಿರುದ್ದ ಕ್ರಮಕ್ಕೆ ಆಗ್ರಹ

- Advertisement -G L Acharya panikkar
- Advertisement -

ಕಡಬ: ಶಾಲೆಯ ಶಿಕ್ಷಕರೋರ್ವರು ಥಳಿಸಿದ್ದಾರೆ ಎಂದು ಆರೋಪಿಸಿ ಇಬ್ಬರು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾದ ಘಟನೆ ಕಡಬದಲ್ಲಿ ನಡೆದಿದೆ.

ಕಡಬ ಸರ್ಕಾರಿ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿಗಳಾದ ಸುದೀಶ್ ಮತ್ತು ದಿಗಂತ್ ಎಂಬಿಬ್ಬರು ಆಸ್ಪತ್ರೆಗೆ ದಾಖಲಾದವರು. ಇವರಿಗೆ ಈ ಶಾಲೆಯ ಶಿಕ್ಷಕ ಖಾದರ್ ಎಂಬವರು ಕೆನ್ನೆಗೆ ಥಳಿಸಿದ್ದರಿಂದ ವಿದ್ಯಾರ್ಥಿಗಳ ಕೆನ್ನೆ ಊದಿಕೊಂಡಿದ್ದು, ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ. ಇದೀಗ ಶಿಕ್ಷಕರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿಗಳ ಪೋಷಕರು ಕ್ಷೇತ್ರ ಶಿಕ್ಷಣಾಧಿಕಾರಿಯವರಿಗೆ ಆಗ್ರಹಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಉಪ ಪ್ರಾಂಶುಪಾಲೆ ವೇದಾವತಿಯವರು, ನಾನು ವಿದ್ಯಾರ್ಥಿಗಳನ್ನು ಭೇಟಿಯಾಗಿ ವಿಚಾರಿಸಿದ್ದು ಆರೋಗ್ಯವಾಗಿದ್ದಾರೆ. ಈ ಬಗ್ಗೆ ವಿಚಾರಿಸುವುದಾಗಿ ತಿಳಿಸಿದ್ದಾರೆ.

- Advertisement -

Related news

error: Content is protected !!