Friday, April 26, 2024
spot_imgspot_img
spot_imgspot_img

ಕಡಬ: ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ ಮಹಿಳೆ ಸಾವು; ಪತ್ನಿಯ ಸಾವಿನ ಸುದ್ದಿ ತಿಳಿಯುತ್ತಲೇ ಪರಾರಿಯಾಗಲೆತ್ನಿಸಿದ ಪತಿ ಪೊಲೀಸ್ ವಶಕ್ಕೆ!

- Advertisement -G L Acharya panikkar
- Advertisement -

ಕಡಬ: ವಿಷ ಸೇವಿಸಿ ಮಂಗಳೂರಿನ ಆಸ್ಫತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ನ .12 ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತ ಮಹಿಳೆ ಇಚ್ಲಂಪಾಡಿ ಗ್ರಾಮದ ನಿಡ್ಯಡ್ಕ ನಿವಾಸಿ ವೆಂಕಟೇಶ್ ಎಂಬವರ ಪತ್ನಿ ಸೌಮ್ಯ (36) ಎನ್ನಲಾಗಿದೆ.

ಈಕೆ ನಾಲ್ಕು ದಿನಗಳ ಹಿಂದೆ ವಿಷ ಪದಾರ್ಥ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದು, ಆಕೆಯನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು . ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ ಅವರು ಶುಕ್ರವಾರ ಮೃತಪಟ್ಟಿದ್ದಾರೆ. ವೆಂಕಟೇಶ್ ತಮಿಳುನಾಡು ನಿವಾಸಿಯಾಗಿದ್ದು , ಈತ ಅಲ್ಲಿನ ಬಟ್ಟೆ ಮಳಿಗೆಯೊಂದರಲ್ಲಿ ಕೆಲಸ ಮಾಡುತ್ತಿದ್ದ .

ಈ ವೇಳೆ ಅಲ್ಲಿಯೇ ಕೆಲಸಮಾಡುತ್ತಿದ್ದ ಇಚ್ಲಂಪಾಡಿಯ ಸೌಮ್ಯರನ್ನು ಪ್ರೀತಿಸಿ ಮದುವೆಯಾಗಿದ್ದರು. ಇಚ್ಲಂಪಾಡಿಯ ನಿಡ್ಯಡ್ಕದಲ್ಲಿರುವ ಪತ್ನಿಯ ತವರು ಮನೆಯಲ್ಲಿ ವಾಸವಾಗಿದ್ದರು. ಈ ದಂಪತಿಗೆ ಒಂದು ಗಂಡು ಹಾಗೂ ಒಂದು ಹೆಣ್ಣು ಮಗುವಿದೆ.

ಸೌಮ್ಯರವರು ಗೋಳಿಯಡ್ಕ ದ ಗೇರುಬೀಜದ ಫ್ಯಾಕ್ಟರಿಯೊಂದರಲ್ಲಿ ಕಾರ್ಮಿಕರಾಗಿದ್ದರು. ವೆಂಕಟೇಶ್ ಕೂಲಿ ಕೆಲಸಮಾಡಿ ಜೀವನ ಸಾಗಿಸುತಿದ್ದರು . ಸೌಮ್ಯರವರು ನವೆಂಬರ್ 9ರಂದು ಸಂಜೆ ಮನೆಯಲ್ಲಿ ವಿಷ ಪದಾರ್ಥ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದರು.

ಇದರ ಬೆನ್ನಲ್ಲೇ ಆಕೆಯ ಪತಿ ವೆಂಕಟೇಶ್ ಸಹ ಇಲಿ ಪಾಷಾಣ ಸೇವಿಸಿದ್ದರು.ಈ ಹಿನ್ನೆಲೆ ಸ್ಥಳೀಯರು ಇಬ್ಬರನ್ನು ಕಡಬ ಸಮುದಾಯ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಸರ್ಕಾರಿ ಆಸ್ಪತ್ರೆ ಗೆ ದಾಖಲಿಸಿದ್ದರು.

ಸೌಮ್ಯ ರವರ ಆರೋಗ್ಯ ತೀವ್ರ ಹದಗೆಟ್ಟ ಹಿನ್ನೆಲೆ ಅವರನ್ನು ಮರುದಿನ ಬೆಳಗ್ಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು . ಅಲ್ಲಿ ಚಿಕಿತ್ಸೆ ಗೆ ಸ್ಪಂದಿಸದೇ ಆಕೆ ಮೃತಪಟ್ಟಿದ್ದಾರೆ.ಇತ್ತ ಸೌಮ್ಯ ಮೃತಪಟ್ಟಿರುವ ಸುದ್ದಿ ತಿಳಿಯುತ್ತಿದ್ದಂತೆ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪತಿ ವೆಂಕಟೇಶ್ ಅಲ್ಲಿಂದ ಪರಾರಿಯಾಗಿದ್ದರು.

ಈ ಕುರಿತು ವೈದ್ಯರು ಪುತ್ತೂರು ನಗರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದು , ಅವರು ಉಪ್ಪಿ ನಂಗಡಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ವೆಂಕಟೇಶ್, ತಮಿಳುನಾಡಿಗೆ ಹೋಗಲು ಮಂಗಳೂರು ರೈಲ್ವೆ ನಿಲ್ದಾಣಕ್ಕೆ ತೆರಳಿರುವ ಕುರಿತು ಮಾಹಿತಿ ಪಡೆದುಕೊಂಡ ಉಪ್ಪಿನಂಗಡಿ ಪೊಲೀಸರು, ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement -

Related news

error: Content is protected !!