Tuesday, April 30, 2024
spot_imgspot_img
spot_imgspot_img

ಕಡಬ: ಸೇತುವೆ ತಡೆಗೋಡೆಗೆ ಕಾರು ಡಿಕ್ಕಿ; ಓರ್ವ ಸಾವು, ಇಬ್ಬರು ಗಂಭೀರ

- Advertisement -G L Acharya panikkar
- Advertisement -

ಕಡಬ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಿರು ಸೇತುವೆಯ ತಡೆಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಚೇರು ಎಂಬಲ್ಲಿ ನಡೆದಿದೆ.

ರಾಮನಗರದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಯಾತ್ರಾರ್ಥಿಗಳಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಿರು ಸೇತುವೆಯ ತಡೆಗೋಡೆಗೆ ಢಿಕ್ಕಿ ಹೊಡೆದಿದೆ.

ಇದರಿಂದ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನುಳಿದಂತೆ ಇಬ್ಬರು ಗಂಭೀರ ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಮೃತರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ಮೃತದೇಹವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

vtv vitla
vtv vitla
- Advertisement -

Related news

error: Content is protected !!