Saturday, April 20, 2024
spot_imgspot_img
spot_imgspot_img

ಕಡಬ: ಹೆದ್ದಾರಿ ಬದಿ ನಿಲ್ಲಿಸಿದ್ದ ಕಾರಿನ ಮೇಲೆ ಬಿದ್ದ ಮರ; ಚಾಲಕ ದಾರುಣ ಸಾವು..!

- Advertisement -G L Acharya panikkar
- Advertisement -
vtv vitla
vtv vitla

ಕಡಬ: ಕಾರಿನ ಮೇಲೆ ಮರಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಅಡ್ಡಹೊಳೆಯಲ್ಲಿ ಭಾನುವಾರ ಬೆಳಿಗ್ಗೆ 7.30ರ ವೇಳೆಗೆ ಸಂಭವಿಸಿದೆ ಎಂದು ವರದಿಯಾಗಿದೆ

vtv vitla

ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ಶಬ್ದ ಬಂದ ಹಿನ್ನೆಲೆ ಚಾಲಕ ಕಾರನ್ನು ನಿಲ್ಲಿಸಿ ಬಾನೆಟ್ ತೆಗೆಯುತ್ತಿದ್ದ ವೇಳೆ ಹೆದ್ದಾರಿ ಬದಿಯಲ್ಲಿದ್ದ ಆಲುಮಡ್ಡಿ ಮರವೊಂದು ಕಾರಿನ ಮೇಲೆ ಬಿದ್ದಿದ್ದು, ಘಟನೆಯಲ್ಲಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಕಾರಿನಲ್ಲಿದ್ದ ಮಹಿಳೆ ಹಾಗೂ ಇಬ್ಬರು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಇವರೆಲ್ಲರೂ ಉಡುಪಿ ಮೂಲದವರಾಗಿದ್ದು ಬೆಂಗಳೂರಿಗೆ ತೆರಳುತ್ತಿದ್ದರು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!